ದಿನದ ಸುದ್ದಿ
ಜಲಜೀವನ್ ಮಿಷನ್ ಅನುಷ್ಠಾನ : ಮಾ.7-8 ರಂದು ತರಬೇತಿ
ಸುದ್ದಿದಿನ,ದಾವಣಗೆರೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್ ದಾವಣಗರೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಇವರ ಸಹಯೋಗದಲ್ಲಿ ಮಾ.07 ಮತ್ತು 8 ರಂದು ಬೆಳಿಗ್ಗೆ 9.30 ರಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಲಜೀವನ್ ಮಿಷನ್ ಅನುಷ್ಠಾನದ ಕುರಿತು ದಾವಣಗೆರೆ ಜಿಲ್ಲೆಯ ತಾಂತ್ರಿಕ ಸಿಬ್ಬಂದಿಗಳಿಗೆ ಎರಡು ದಿನಗಳ ತರಬೇತಿ ಕಾರ್ಯಗಾರ ಏರ್ಪಡಿಸಲಾಗಿದೆ.
ಜಿ.ಪಂ. ಸಿಇಓ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಸಿ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತದ ಅಧೀಕ್ಷಕ ಇಂಜಿನಿಯರ್ ಕೆ.ಟಿ ನಾಗರಾಜ್, ರಾಜ್ಯ ಸಂಪನ್ಮೂಲ ವ್ಯಕ್ತಿ ಎಸ್.ಎಎಸ್. ಅತ್ತರವಾಲಾ, ಮತ್ತು ವೆಂಕಟೇಶ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243