Connect with us

ದಿನದ ಸುದ್ದಿ

ಜಲಶಕ್ತಿ ಅಭಿಯಾನ 2021 ಕಾರ್ಯಕ್ರಮ ಕ್ರಿಯಾ ಯೋಜನೆಗೆ ಅಸ್ತು:ಅಭಿಯಾನ ಯಶಸ್ವಿಗೊಳಿಸಲು ಡಿಸಿ ಮಹಾಂತೇಶ್ ಬೀಳಗಿ ಕರೆ

Published

on

ಸುದ್ದಿದಿನ,ದಾವಣಗೆರೆ : ಜಲಶಕ್ತಿ ಅಭಿಯಾನ 2021 ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಮಳೆ ನೀರನ್ನು ಸಂಗ್ರಹಿಸಿ, ಶೇಖರಿಸಿ, ಬಳಕೆ ಮಾಡುವ ಹಾಗೂ ನೀರಿನ ಮೂಲಗಳನ್ನು ಸಂರಕ್ಷಿಸುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಯು 100 ದಿನಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿತು.

ಮಂಗಳವಾರ ಸಂಜೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ‘ಜಲಶಕ್ತಿ ಅಭಿಯಾನ 2021’ ಕಾರ್ಯಕ್ರಮ ಅನುಷ್ಟಾನದ ಹಿನ್ನೆಲೆ ಕ್ರಿಯಾಯೋಜನೆಗೆ ಅನುಮೋದನೆ ನೀಡುವ ಹಾಗೂ ಕಾರ್ಯಕ್ರಮ ಯಶಸ್ವಿಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆ ವಹಿಸಿ, ಅಭಿಯಾನದ ಸುಮಾರು 2442 ಕಾರ್ಯಕ್ರಮಗಳ 100 ದಿನಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರು.

ಇದನ್ನೂ ಓದಿ | ದಾವಣಗೆರೆ | ಸ್ವಾತಂತ್ರ್ಯ ಅಮೃತ ಮಹೋತ್ಸವ : ಏ.2 ಕ್ಕೆ ಚಾಲನೆ

ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರವು ಜಲಶಕ್ತಿ ಅಭಿಯಾನ 2021 ಕ್ಕೆ ‘ಕ್ಯಾಚ್ ದಿ ರೈನ್ – ವೇರ್ ಇಟ್ ಫಾಲ್ಸ್, ವೆನ್ ಇಟ್ ಫಾಲ್ಸ್’, ಅಂದರೆ ಮಳೆ ಬಂದಾಗ ನೀರನ್ನು ಸಂಗ್ರಹಿಸುವ ಧ್ಯೇಯ ವಾಕ್ಯದೊಂದಿಗೆ ಮಾನ್ಯ ಪ್ರಧಾನಮಂತ್ರಿಯವರು ಮಾರ್ಚ್ 22 ರಂದು ಚಾಲನೆ ನೀಡಿದ್ದು, ಎಲ್ಲ ರಾಜ್ಯಗಳಲ್ಲಿ ಮಾ.22 ರಿಂದ ನ.30 ರವರೆಗೆ ನೀರಿನ ತೇವಾಂಶ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಮಳೆ ನೀರು ಸಂಗ್ರಹಣೆ, ಶೇಖರಣೆ ಮತ್ತು ಬಳಕೆ ಹಾಗೂ ಜಲ ಮೂಲ ಸಂರಕ್ಷಣೆ ಮಾಡಲು ಹಾಗೂ ಶುದ್ದ ನೀರಿನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸರ್ಕಾರಿ ಕಟ್ಟಡಗಳು, ಶಾಲೆಗಳು, ಹಾಸ್ಟೆಲ್‍ಗಳು, ಖಾಸಗಿ ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಮಳೆ ನೀರನ್ನು ಸಂಗ್ರಹಿಸಿ ಭೂಮಿಯಲ್ಲಿ ಇಂಗಿಸುವ ಅಥವಾ ಬಳಸುವ ಬಗ್ಗೆ ಹಾಗೂ ಕೆರೆ, ಕಲ್ಯಾಣಿ ಅಭಿವೃದ್ದಿ, ಹಸುರೀಕರಣ ಕಾರ್ಯ ಕೈಗೊಳ್ಳಲು ತಾ.ಪಂ ಇಓ ಗಳು, ವಿವಿಧ ಇಲಾಖೆಗಳು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿದ್ದಾರೆ.

ನಗರ ಭಾಗದ ದೊಡ್ಡ ಕಟ್ಟಡಗಳಲ್ಲಿ ಮಳೆ ನೀರು ಸದ್ಬಳಕೆ ಹಾಗೂ ನೀರಿನ ಮೂಲಕ ಸಂರಕ್ಷಣೆ ಕುರಿತು ಪಾಲಿಕೆ ಆಯುಕ್ತರು ಹಾಗೂ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು ಕ್ರಮ ವಹಿಸಬೇಕು. ಹಾಗೂ ಡಿಡಿಪಿಐ ರವರು ಶಾಲಾ ಕಟ್ಟಡಗಳಲ್ಲಿ ನರೇಗಾದಡಿ ಮಳೆ ಕೊಯ್ಲು ಅಥವಾ ಮಳೆ ನೀರು ಇಂಗಿಸಲು ಕ್ರಮ ವಹಿಸಬೇಕು. ಹಾಗೂ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪ್ರತಿವಾರ ನನಗೆ ವರದಿ ನೀಡಬೇಕೆಂದರು.

ಕೆರೆಗಳ ಅಭಿವೃದ್ದಿ ಸೇರಿದಂತೆ ಮಳೆ ನೀರು ಹಾಗೂ ನೀರಿನ ಮೂಲ ಸಂರಕ್ಷಣೆ ಕಾಮಗಾರಿಗಳನ್ನು ದಾನಿಗಳ ಸಹಾಯ ಪಡೆದು ಕೂಡ ಮಾಡಬಹುದು. ದಾನಿಗಳಿಂದ ಜೆಸಿಬಿ, ಡೀಸೆಲ್ ಇತ್ಯಾದಿ ಅಭಿಯಾನದ ಯಶಸ್ಸಿಗೆ ಪೂರಕ ಸಹಾಯ ಪಡೆಯಬಹುದು ಎಂದರು.

ಸಾಮಾಜಿಕ ಅರಣ್ಯ ವಿಭಾಗದಿಂದ ಜಿಲ್ಲೆಯ ಸರ್ಕಾರಿ ಶಾಲೆಗಳು ಮತ್ತು ಇತರೆ ಕಚೇರಿ ಕಟ್ಟಗಳ ಆವರಣದಲ್ಲಿ ಜೂನ್ 5 ರ ವನಮಹೋತ್ಸವದಂದು ನೆಡಲು 50 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೀಡುವಂತೆ ಅರಣ್ಯ ಅಧಿಕಾರಿಗೆ ಸೂಚನೆ ನೀಡಿದ ಅವರು ಎಲ್ಲ ವಿದ್ಯಾರ್ಥಿಗಳು ಅಂದು ಒಂದೊಂದು ಗಿಡ ದತ್ತು ಪಡೆದು ಗಿಡಕ್ಕೆ ನೀರು ಹಾಕಿ ಬೆಳೆಸುವಂತೆ ಪ್ರೇರೇಪಿಸಬೇಕೆಂದು ಡಿಡಿಪಿಐ ರವರಿಗೆ ತಿಳಿಸಿದರು.

ಜಗಳೂರಿನಲ್ಲಿ ಬಿಳಿಚೋಡು ಕೆರೆ, ಸಂಗೇನಹಳ್ಳಿ, ತುಪ್ಪದಹಳ್ಳಿ ಮತ್ತು ಜಗಳೂರು ಪಟ್ಟಣದಲ್ಲಿ ದೊಡ್ಡ ಕೆರೆಗಳಿದ್ದು ಕೆರೆ ಅಭಿವೃದ್ದಿ ಸೇರಿದಂತೆ ಇಂಗುಗುಂಡಿ, ಗೋಕಟ್ಟೆ ನಿರ್ಮಾಣ, ಹಸಿರೀಕರಣ ಮತ್ತು ಮಳೆ ಕೊಯ್ಲು ಯೋಜನೆಗೆ ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ ಎಂದು ತಾ.ಪಂ ಇಓ ತಿಳಿಸಿದರು.

ಚನ್ನಗಿರಿಯಲ್ಲಿ 6 ಮತ್ತು ಹೊನ್ನಾಳಿಯಲ್ಲಿ 18 ಮಳೆ ಕೊಯ್ಲು ಯೋಜನೆ ಸೇರಿ ಒಟ್ಟು 66 ಮಳೆಕೊಯ್ಲು, ಇಂಗುಗುಂಡಿ, ಕಲ್ಯಾಣಿ, ಕೆರೆ ಅಭಿವೃದ್ದಿ ಹಾಗೂ ವಿವಿಧ ನೀರಿನ ಮೂಲ ಸಂರಕ್ಷಣೆ ಕುರತು ಎಲ್ಲ ತಾಲ್ಲೂಕುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸೇರಿ ಒಟ್ಟು 2442 ಕಾಮಗಾರಿಗಳಿಗೆ ಸಮಿತಿಯು ಇಂದು ಅನುಮೋದನೆ ನೀಡಿದ್ದು, ಸಂಬಂಧಿಸಿದ ಎಲ್ಲ ಸ್ಥಳೀಯ ಸಂಸ್ಥೆಗಳು, ಶಿಕ್ಷಣ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಸೇರಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಜಿ.ಪಂ. ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಸಮಗ್ರ ಕೆರೆ ಅಭಿವೃದ್ದಿ ಯೋಜನೆಯಡಿ ವಿವಿಧ ತಾಲ್ಲೂಕುಗಳ ಕೆರೆಗಳಲ್ಲಿ ಹೂಳೆತ್ತೆಸಿ ಅಭಿವೃದ್ದಿಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಒತ್ತು ನೀಡಿ, ಭೂಮಿ ಲಭ್ಯತೆ ಇದ್ದರೆ ತಹಶೀಲ್ದಾರರು ಜಿಲ್ಲೆಯಲ್ಲಿ ಹೊಸ ಕೆರೆಗಳನ್ನು ಸಹ ಮಾಡಬೇಕು ಎಂದರು.

ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅಭಿಯಾನಕ್ಕೆ ಚಾಲನೆ ಈ ಅಭಿಯಾನ ಕಾರ್ಯಕ್ರಮದ ಚಾಲನೆಯನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ ಶಾಸಕರು ಮತ್ತು ಉಸ್ತುವಾರಿ ಮಂತ್ರಿಗಳಿಂದ ಮಾಡಿಸಬೇಕಿದ್ದು, ಜಗಳೂರು ತಾಲ್ಲೂಕಿನ ಗುತ್ತಿದುರ್ಗದ ಕೊಣಚಗಲ್‍ಗುಡ್ಡದ ಕಲ್ಯಾಣಿಯನ್ನು ಅಭಿವೃದ್ದಿಪಡಿಸಿ ಇಲ್ಲಿಯೇ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಚಾಲನೆ ನೀಡಲು ಡಿಪಿಆರ್ ಮತ್ತಿತರೆ ತಯಾರಿ ನಡೆಸುವಂತೆ ತಾ.ಪಂ ಇಓ ಮತ್ತು ತಹಶೀಲ್ದಾರರಿಗೆ ಸೂಚನೆ ಜಿ.ಪಂ ಸಿಇಓ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಧೂಡಾ ಆಯುಕ್ತ ಕುಮಾರಸ್ವಾಮಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ತೋಟಗಾರಿಕೆ ಇಲಾಖೆ ಡಿಡಿ ಲಕ್ಷ್ಮೀಕಾಂತ್ ಬೊಮ್ಮನ್ನಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮಾ ಕೌಸರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಸೇರಿದಂತೆ ತಾ.ಪಂ ಇಓ ಗಳು, ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending