ಸಿನಿ ಸುದ್ದಿ

ಫೆ11 ಕ್ಕೆ ಅಪ್ಪು ಅಭಿನಯದ ಜೇಮ್ಸ್‌ ಸಿನೆಮಾ ಟೀಸರ್ ರಿಲೀಸ್

Published

on

ಸುದ್ದಿದಿನ,ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಪುನೀತ್ ಅಗಲಿಕೆಗೂ ಮುನ್ನ ಕೊನೆದಾಗಿ ಅಭಿನಯಿಸಿರುವ ಸಿನಿಮಾ ಜೇಮ್ಸ್ ಆಗಿದ್ದು, ಈ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇತ್ತೀಚೆಗಷ್ಟೇ ಜೇಮ್ಸ್ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿ ಚಿತ್ರತಂಡ ಭಾರೀ ಸದ್ದು ಮಾಡಿತ್ತು. ಇದೀಗ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ವೀಟ್

ಕಾರಿನ ಮೇಲೆ ಜೆ ಎಂದು ಸಿಂಬಲ್ ಇರುವ ಫೋಟೋವನ್ನು ಶೇರ್ ಮಾಡಿಕೊಂಡಿರುವ ಅಶ್ವಿನಿ ಅವರು ಫೆಬ್ರವರಿ 11 ರಂದು ಬೆಳಿಗ್ಗೆ 11.11 ಕ್ಕೆ ಜೇಮ್ಸ್ ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಜೇಮ್ಸ್ ಸಿನಿಮಾಕ್ಕೆ ನಟ ಶಿವರಾಜ್ ಕುಮಾರ್ ವಾಯ್ಸ್ ಡಬ್ಬಿಂಗ್ ನೀಡುತ್ತಿದ್ದಾರೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version