Connect with us

ದಿನದ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಜನಾರ್ಧನ ರೆಡ್ಡಿ ಮಾಡಿದ್ರು ತುಳಸಿ ಪೂಜೆ; ಇಂದು ಜಾಮೀನು ವಿಚಾರಣೆ

Published

on

gali janardhan reddy_suddidina

ಸುದ್ದಿದಿನ ಬೆಂಗಳೂರು: ಆಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಪರಪ್ಪನ ಅಗ್ರಾಹಾರದಲ್ಲಿ ತುಳಸಿ ಕಟ್ಟೆಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪೂಜೆ ಸಲ್ಲಿಸಿ ತಮಗೆ ಜಾಮೀನು ಸಿಗಲೆಂದು ಬೇಡಿಕೊಂಡರು. ಆನಂತರ ಜೈಲಿನಲ್ಲಿನ ನೀಡುವ ಉಪಹಾರದ ಬದಲು ಚಾಲುಕ್ಯ ವೃತ್ತದಲ್ಲಿರುವ ಇಡ್ಲಿ, ವಡೆ ತರಿಸಿಕೊಂಡು ಸೇವನೆ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಆಂಬಿಡೆಂಟ್ ಪ್ರಕರಣದಲ್ಲಿ 20 ಕೋಟಿ ಡೀಲ್‍ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಾಹಾರ ಸೇರಿದ್ದರು. ಸಾಲು ಸಾಲು ರಜೆಗಳು ಬಂದಿದ್ದರಿಂದ ಜಾಮೀನು ಮಂಜೂರು ಮುಂದಕ್ಕೆ ಹೋಗಿತ್ತು. ಇಂದು ಜಾಮೀನು ಮಂಜೂರು ಕುರಿತ ತೀರ್ಪು ಹೊರಬೀಳಲಿದೆ. ಅದಕ್ಕಾಗಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಬುಧವಾರ ಬೆಳಗ್ಗೆ ಪರಪ್ಪನ ಅಗ್ರಾಹಾರದಲ್ಲಿ ತುಳಸಿ ಕಟ್ಟೆಗೆ ಪೂಜೆ ಸಲ್ಲಿಸಿದರು. ಆನಂತರ ಜೈಲಿನಲ್ಲಿನ ನೀಡುವ ಉಪಹಾರದ ಬದಲು ಚಾಲುಕ್ಯ ವೃತ್ತದಲ್ಲಿರುವ ಇಡ್ಲಿ, ವಡೆ ತರಿಸಿಕೊಂಡು ತಿಂದರು ಎಂದು ಮೂಲಗಳು ತಿಳಿಸಿವೆ.

ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಿಚಾರಣೆ ವೇಳೆ ಪೋಲೀಸರ ತನಿಖಾ ಕ್ರಮವನ್ನು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

Published

on

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

Published

on

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.

ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್‌ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending