Connect with us

ರಾಜಕೀಯ

ಜಾರಕಿಹೊಳಿ ಸಹೋದರರು – ಲಕ್ಷ್ಮೀ ಹೆಬ್ಬಾಳಕರ್ ನಡುವಿನ ಭಿನ್ನಮತ ಶಮನ

Published

on

ಸುದ್ದಿದಿನ ಡೆಸ್ಕ್: ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳಕರ್ ನಡುವೆ ಏರ್ಪಟಿದ್ದ ಭಿನ್ನಮತ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮೂಲಕ ಕೊನೆಗೂ ಸುಖಾಂತ್ಯ ಕಂಡಿದೆ. ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವೆ ಒಮ್ಮತ ಮೂಡಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ.

ಅಂತಿಮವಾಗಿ ಅಧ್ಯಕ್ಷ ಉಪಾಧ್ಯಕ್ಷ ರನ್ನು ಅವಿರೋಧವಾಗ ಆಯ್ಕೆ ಮಾಡಲಾಗಿದ್ದು, ಮರಾಠಾ ಸಮುದಾಯದ ಮಹಾದೇವ ಪಾಟೀಲ ಅಧ್ಯಕ್ಷರಾಗಿ, ಮುಸ್ಲಿಂ ಸಮುದಾಯದ ಬಾಪು ಜಮಾದಾರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆ ಮುಗಿದ ಬಳಿಕ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ ಭಿನ್ನಮತ ಮತ್ತು ಸಂವಹನದ ಕೊರತೆಯಿಂದಾಗಿ ಮುಂದೂಡಲಾಗಿತ್ತು. ಈ ವಿಚಾರವನ್ನು ಶಾಂತರೀತಿಯಲ್ಲಿ ಬಗೆಹರಿಸಲಾಗಿದೆ.

ಕಾಂಗ್ರೆಸ್ ವರಿಷ್ಠರ ಸೂಚನೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಸಲಾಗಿದೆ‌. ಈ ಆಯ್ಕೆ ಎಲ್ಲರ ಸಹಮತವಿದೆ. ಸಮ್ಮಿಶ್ರ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಪಿಎಲ್.ಡಿ ಬ್ಯಾಂಕ್ ಚುನಾವಣೆ ಸಣ್ಣ ಚುನಾವಣೆ. ಸೌಹಾರ್ದತೆಯಿಂದ ಬಗೆ ಹರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸಧ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಅಂಕಿ ಅಂಶಗಳ ಸಮೇತ ವಿವರಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಹಾಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ ಎಂದು ಹೇಳಿದರು.

GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ ಎಂದು ದೂರಿದರು. ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಎಂದು ಸಮರ್ಥಿಸಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 seconds ago

ಸಧ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ...

ದಿನದ ಸುದ್ದಿ5 hours ago

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ...

ದಿನದ ಸುದ್ದಿ8 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ9 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ24 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ1 day ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ1 day ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

Trending