ರಾಜಕೀಯ

ಜಾರಕಿಹೊಳಿ ಸಹೋದರರು – ಲಕ್ಷ್ಮೀ ಹೆಬ್ಬಾಳಕರ್ ನಡುವಿನ ಭಿನ್ನಮತ ಶಮನ

Published

on

ಸುದ್ದಿದಿನ ಡೆಸ್ಕ್: ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳಕರ್ ನಡುವೆ ಏರ್ಪಟಿದ್ದ ಭಿನ್ನಮತ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮೂಲಕ ಕೊನೆಗೂ ಸುಖಾಂತ್ಯ ಕಂಡಿದೆ. ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವೆ ಒಮ್ಮತ ಮೂಡಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ.

ಅಂತಿಮವಾಗಿ ಅಧ್ಯಕ್ಷ ಉಪಾಧ್ಯಕ್ಷ ರನ್ನು ಅವಿರೋಧವಾಗ ಆಯ್ಕೆ ಮಾಡಲಾಗಿದ್ದು, ಮರಾಠಾ ಸಮುದಾಯದ ಮಹಾದೇವ ಪಾಟೀಲ ಅಧ್ಯಕ್ಷರಾಗಿ, ಮುಸ್ಲಿಂ ಸಮುದಾಯದ ಬಾಪು ಜಮಾದಾರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆ ಮುಗಿದ ಬಳಿಕ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ ಭಿನ್ನಮತ ಮತ್ತು ಸಂವಹನದ ಕೊರತೆಯಿಂದಾಗಿ ಮುಂದೂಡಲಾಗಿತ್ತು. ಈ ವಿಚಾರವನ್ನು ಶಾಂತರೀತಿಯಲ್ಲಿ ಬಗೆಹರಿಸಲಾಗಿದೆ.

ಕಾಂಗ್ರೆಸ್ ವರಿಷ್ಠರ ಸೂಚನೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಸಲಾಗಿದೆ‌. ಈ ಆಯ್ಕೆ ಎಲ್ಲರ ಸಹಮತವಿದೆ. ಸಮ್ಮಿಶ್ರ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಪಿಎಲ್.ಡಿ ಬ್ಯಾಂಕ್ ಚುನಾವಣೆ ಸಣ್ಣ ಚುನಾವಣೆ. ಸೌಹಾರ್ದತೆಯಿಂದ ಬಗೆ ಹರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version