Connect with us

ದಿನದ ಸುದ್ದಿ

ಜಾತಿ ಗಣತಿಯನ್ನು ಸಚಿವ ಸಂಪುಟ ಮುಂದಿರಿಸಿ ಅನುಷ್ಠಾನಗೊಳಿಸಲು ಕ್ರಮ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ವಿವಿಧ ಸೌಲಭ್ಯಗಳಿಂದ ವಂಚಿತರಾದವನ್ನು ಗುರುತಿಸುವ ಉದ್ದೇಶದೊಂದಿಗೆ ತಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದ್ದು, ಕಾರಣಾಂತರದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ದೇಶದಲ್ಲಿ ಜನಸಂಖ್ಯೆಯ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ1930 ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

ಹಿಂದುಳಿದವರಿಗೆ, ದಲಿತ-ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಉದೇಶವಾಗಿತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಿ ಉತ್ತಮ ಮಾನವರಾಗಿ ರೂಪಿಸುವಂತಹ ಶಿಕ್ಷಣವೇ ಗುಣಮಟ್ಟದ ಶಿಕ್ಷಣವಾಗಿದೆ ಎಂದರು.

ನಗರದ ಅಶೋಕಪುರಂನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 245 ವೀಳ್ಯದೆಲೆ ಬೆಳೆಗಾರರಿಗೆ ಅರ್ಧಗುಂಟೆ ಜಾಗ ನೀಡುವುದು. ವ್ಯಾಯಾಮ ಶಾಲೆ, ಸಭಾಭವನ, ವಾಣಿಜ್ಯ ಸಂಕಿರಣ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ದುರಸ್ಥಿ ಕಾರ್ಯಗಳಿಗೆ ಹಸಿರು ನಿಶಾನೆ ತೋರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.

ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.

ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.

ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.

ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.

ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಕ್ಕಳ ದಿನಾಚರಣೆ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿದ ವ್ಯಕ್ತಿ ಹಾಗೂ ಸಂಸ್ಥೆಗೆ ಪ್ರಶಸ್ತಿ ಪತ್ರ ನೀಡಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 14 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ಗ್ರಂಥಾಲಯ ಇಲಾಖೆಯಿಂದ 2021 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಲೇಖಕರು, ಪ್ರಕಾಶಕರು, ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದ್ದು ರಾಜ್ಯ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾದ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ ಮತ್ತು ದಾವಣಗೆರೆ ಕೇಂದ್ರ ಗ್ರಂಥಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 9 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending