ದಿನದ ಸುದ್ದಿ

ಜಾತಿ ಗಣತಿಯನ್ನು ಸಚಿವ ಸಂಪುಟ ಮುಂದಿರಿಸಿ ಅನುಷ್ಠಾನಗೊಳಿಸಲು ಕ್ರಮ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ವಿವಿಧ ಸೌಲಭ್ಯಗಳಿಂದ ವಂಚಿತರಾದವನ್ನು ಗುರುತಿಸುವ ಉದ್ದೇಶದೊಂದಿಗೆ ತಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದ್ದು, ಕಾರಣಾಂತರದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ದೇಶದಲ್ಲಿ ಜನಸಂಖ್ಯೆಯ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ1930 ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

ಹಿಂದುಳಿದವರಿಗೆ, ದಲಿತ-ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಉದೇಶವಾಗಿತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಿ ಉತ್ತಮ ಮಾನವರಾಗಿ ರೂಪಿಸುವಂತಹ ಶಿಕ್ಷಣವೇ ಗುಣಮಟ್ಟದ ಶಿಕ್ಷಣವಾಗಿದೆ ಎಂದರು.

ನಗರದ ಅಶೋಕಪುರಂನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 245 ವೀಳ್ಯದೆಲೆ ಬೆಳೆಗಾರರಿಗೆ ಅರ್ಧಗುಂಟೆ ಜಾಗ ನೀಡುವುದು. ವ್ಯಾಯಾಮ ಶಾಲೆ, ಸಭಾಭವನ, ವಾಣಿಜ್ಯ ಸಂಕಿರಣ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ದುರಸ್ಥಿ ಕಾರ್ಯಗಳಿಗೆ ಹಸಿರು ನಿಶಾನೆ ತೋರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version