ದಿನದ ಸುದ್ದಿ
ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ; ಕಾರಣ ಏನು ಗೊತ್ತಾ..!?
ಸುದ್ದಿದಿನ,ಬೆಂಗಳೂರು : ಸೀಸನ್ ಮೂರರ ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಶ್ರೀ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇತ್ತೀಚಿಗೆ ಕೆಲದಿನಗಳಿಂದ ಅತೀವ ಖಿನ್ನತೆಯಿಂದ ಬಳಲುತ್ತಿದ್ದರು.
ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಗತಿ ಬಡಾವಣೆಯ ಅಪಾರ್ಟ್ಮೆಂಟ್ ನಲ್ಲಿ ಜಯಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಅಂದಹಾಗೇ ಈ ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿದ್ದರು. ಆನಂತ್ರ ಅವರು ಸಾವಿನಿಂದ ಬಚಾವ್ ಆಗಿದ್ದರು. ಆದ್ರೇ ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನನ್ನ ಜೀವನದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಅದರಿಂದ ಹೊರಬರಲು ಆಗುತ್ತಿಲ್ಲ ನನಗೆ ದಯಾಮರಣ ಕೊಡಿ ಎಂದು ತಮ್ಮ ಫೇಸ್ ಬುಕ್ ನಲ್ಲಿ ಲೈವ್ ಬಂದು ಕೆಲವು ದಿನಗಳ ಹಿಂದೆ ಕೇಳಿಕೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243