ರಾಜಕೀಯ
ವಿಡಿಯೋ | ಜೆಡಿಎಸ್ ಮುಖಂಡನ ಹತ್ಯೆ : ಪೊಲೀಸರ ಸರ್ಪಗಾವಲಿನಲ್ಲಿ ಅಂತ್ಯಕ್ರಿಯೆ
ಸುದ್ದಿದಿನ,ಮಂಡ್ಯ : ಮದ್ದೂರು ಪಟ್ಟಣದಲ್ಲಿ ನೆನ್ನೆ ತೊಪ್ಪನಹಳ್ಳಿಯ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಗೆ ಸಂಬಂಧಿಸಿದಂತೆ ಮಂಗಳವಾರ ಶವಾಗಾರದಿಂದ ಪ್ರಕಾಶ್ ಶವ ಕೊಂಡ್ಡೋಯ್ಯಲು ಗ್ರಾಮಸ್ಥರು ನ್ಯಾಯ ಸಿಗೋವರೆಗೂ ಮತ್ತು ಮುಖ್ಯ ಮಂತ್ರಿಗಳು ಸ್ಥಳಕ್ಕೆ ಬರುವವರೆಗೆ ಶವ ಕೊಂಡ್ಡೋಯ್ಯುವುದಿಲ್ಲವೆಂದು ಗ್ರಾಮಸ್ಥರ ಪಟ್ಟು ಹಿಡಿದಿದ್ದರು ಆಗ ಕೆಲ ಕಾಲ ಪೊಲೀಸರೊಂದಿಗೆ ಗ್ರಾಮಸ್ಥರ ಮಾತಿನ ಚಕಮಕಿ ನಡೆಯಿತು ಮುಖಂಡರುಗಳು ಸಮಾಧಾನ ಪಡಿಸಿದರು.
ಫೋನಿನ ಮೂಲಕ ಸಿ.ಎಂ.ರವರು ಮೃತ ಕುಟುಂಬಕ್ಕೆ ಶವ ಕೊಂಡೊಯ್ಯುವಂತೆ ಮನವಿ ಮಾಡಿದರು ನಂತರ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಸಿಎಂಭರವಸೆ ಮೇರೆಗೆ ಮೃತ ಪ್ರಕಾಶ್ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಗ್ರಾಮಸ್ಥರ ಮನವೊಲಿಸಿದರು. ತೆರೆದ ವಾಹನಕ್ಕೆ ಹೂವಿನ ಅಲಂಕಾರ ಮಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಕೆ.ಹೊನ್ನಲಗೆರೆಯ ಅವರ ಮನೆಗೆ ಪಾರ್ಥಿವ ಶರೀರವನ್ನು ಹತ್ತು ನಿಮಿಷಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು,ಅಲ್ಲಿಂದ ಅವರ ಸ್ವಗ್ರಾಮವಾದ ತೊಪ್ಪನಹಳ್ಳಿಗೆ ಪೊಲೀಸರ ಸರ್ಪಗಾವಲಿನಲ್ಲಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಯಿತು. ಸಿ.ಎಂ. ಎಚ್. ಡಿ. ಕುಮಾರಸ್ವಾಮಿ ಅವರು ಆಗಮಿಸಿ ಅಂತಿಮ ದರ್ಶನ ಪಡೆದರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಪ್ತ ಪ್ರಕಾಶ್ ಆಗಲಿಕ್ಕೆ ನೆನೆದು ಸಿಎಂ ಕಣ್ಣೀರು ಹಾಕಿದರು.
ಪ್ರಕಾಶ್ ವ್ಯಕ್ತಿತ್ವ ಜನರಿಗೆ ಗೊತ್ತಿದೆ ಇವರು ನಮ್ಮ ಪಕ್ಷದ ಕಾರ್ಯಕರ್ತ ಅನ್ನುವುದಕ್ಕಿಂತ ಹೆಚ್ಚಾಗಿ ಜನಪರ ಕಾಳಜಿಯುಳ್ಳ ವ್ಯಕ್ತಿಯಾಗಿದ್ದರು ಇಂತಹ ವ್ಯಕ್ತಿಯನ್ನು ಕಳೆದುಕೊಂಡ ನನಗೆ ನೋವಾಗಿದೆ. 2 ವರ್ಷಗಳ ಹಿಂದೆ ಈ ಗ್ರಾಮದಲ್ಲಿ ಜೋಡಿ ಹತ್ಯೆಯಾದಾಗ ನಾನು ಈ ಗ್ರಾಮಕ್ಕೆ ಬಂದಿದ್ದೆ ಆಗ ಪ್ರಕಾಶ್ ಕೊಲೆಯಾದ ವ್ಯಕ್ತಿಗಳ ಕುಟುಂಬದ ಪರ ನಿಂತಿದ್ದರು ಅದೇ ಕಾರಣಕ್ಕೆ ಕೊಲೆ ಯಾಗಲು ಕಾರಣ ಅನ್ಸುತ್ತೆ ಅವತ್ತು ಕೊಲೆ ಮಾಡಿದವರು ಇಂದು ಪ್ರಕಾಶ್ ಹತ್ಯೆ ಮಾಡಿದ್ದಾರೆ ಅನ್ನೋ ಮಾಹಿತಿ ಇದೆ ನೆನ್ನೆ ನಾನು ವಿಜಯಪುರದಲ್ಲಿ ಇದ್ದಾಗ ಪ್ರಕಾಶ್ ಸಾವಿನ ಸುದ್ದಿ ಬಂತು ಆಗ ಮನಸ್ಸಿಗೆ ಆಗಾಧವಾಗಿ ಉದ್ವೇಗದಿಂದ ಹಂತಕರನ್ನು ಶೂಟ್ ಮಾಡಿ ಎಂದಿದೆ ನಾನು ಮುಖ್ಯಮಂತ್ರಿಯಾಗಿ ಆ ಮಾತು ಹೇಳಲಿಲ್ಲ ಪ್ರಜೆಯಾಗಿ ಆ ಮಾತು ಹೇಳಿದೆ ನಮ್ಮ ದೇಶದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ ಪ್ರಜೆಯಾಗಿ ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ ಯಾಕೆಂದರೆ ಮಾಡುವ ಹಂತಕರು ಬೇಲ್ ಮೇಲೆ ಆಚೆ ಬರ್ತಾರೆ ಈ ರೀತಿಯ ವ್ಯವಸ್ಥೆ ನಮ್ಮ ಕಾನೂನಿನಲ್ಲಿ ಇದೆ ನನ್ನ ಶೂಟೌಟ್ ಹೇಳಿಕೆಯನ್ನು ಮಾಧ್ಯಮದವರು ವೈಭವೀಕರಿಸುತ್ತಾರೆ ಬಿಜೆಪಿಯವರು ನಮ್ಮ ಕಾರ್ಯಕರ್ತರು ಸತ್ತರೆ ಕಾಳಜಿ ಇಲ್ಲ ಅಂತಾರೆ
ಆದರೆ ನನಗೆ ಯಾರ ಹತ್ಯೆ ಆದಾಗಲೂ ಮನಸ್ಸು ತಡೆಯಲಿಲ್ಲ ನನ್ನ ಆಡಳಿತದಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು.
ಇನ್ನು ಪ್ರಕಾಶ್ ಹತ್ಯೆಯ ಸೂಚನೆಯನ್ನು ಗ್ರಾಮಸ್ಥರು ಅಧಿಕಾರಿಗಳಿಗೆ ನೀಡಿದ್ದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿಲ್ಲ ಅಂತ ಮಾಹಿತಿ ಇದೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಆದೇಶಿಸಿದ್ದೇನೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ ಉಳಿದವರಿಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಇನ್ನು ಅಂತಿಮ ದರ್ಶನದಲ್ಲಿ ಸಚಿವರಾದ ಸಾ.ರಾ.ಮಹೇಶ್, ಸಂಸದ ಶಿವರಾಮೇಗೌಡ, ಜಿಲ್ಲೆಯ ಎಲ್ಲಾ ಶಾಸಕರು , ಮತ್ತು ವಿಧಾನ ಪರಿಷತ್ ಸದಸ್ಯರು ಮಾಜಿ ಶಾಸಕ ಚೆಲುವರಾಯಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ , ಹಾಗೂ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಮೊತ್ತ ಎಷ್ಟು ಗೊತ್ತಾ?!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ.
35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್‌ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
