Connect with us

ದಿನದ ಸುದ್ದಿ

ಚನ್ನಗಿರಿ | ಮಾವಿನಕಟ್ಟೆ ಗ್ರಾಮದಲ್ಲಿ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ; ರೈತರಿಗೆ ಹಕ್ಕು ಪತ್ರ ಕೊಡಿಸಿಯೇ ಸಿದ್ದ : ಮಾಡಾಳ್ ವಿರೂಪಾಕ್ಷಪ್ಪ

Published

on

ಸುದ್ದಿದಿನ,ದಾವಣಗೆರೆ : ಅರಣ್ಯ ಇಲಾಖೆ ಒಡೆತನದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡಿರುವ ಯಾವುದೇ ರೈತರು ಸಾಗುವಳಿ ಪತ್ರ ಇಲ್ಲ ಎಂದು ಧೈರ್ಯಗುಂದದಿರಿ, ಈಗಾಗಲೇ ನೀವು ಉಳುಮೆ ಮಾಡಿಕೊಂಡಿರುವ ಜಮೀನಿಗೆ ಹಕ್ಕು ಪತ್ರ ಕೊಡಿಸುತ್ತೇನೆ ಎಂದು ಚನ್ನಗಿರಿ ಶಾಸಕರು ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ಚನ್ನಗಿರಿ ತಾಲ್ಲೂಕು ಮಾವಿನಕಟ್ಟೆ ಗ್ರಾಮದಲ್ಲಿ ಏರ್ಪಡಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಹಿಂದೆ ಕೇಂದ್ರ ಸರ್ಕಾರ ಅರಣ್ಯ ಪ್ರದೇಶಗಳಲ್ಲಿ ಮೂರು ತಲೆಮಾರುಗಳಿಂದ ಉಳುಮೆ ಮಾಡಿಕೊಂಡಿರುವ ಜಮೀನುಗಳ ಹಕ್ಕನ್ನು ಉಳುಮೆ ಮಾಡಿಕೊಂಡಿರುವವರಿಗೆ ನೀಡುತಿತ್ತು, ಈಗ ಆ ಕಾಯ್ದೆಗೆ ತಿದ್ದುಪಡಿ ಮಾಡಿ ಒಂದು ತಲೆಮಾರಿಗೆ ಸೀಮಿತಗೊಳಿಸಿ ಹಕ್ಕುಪತ್ರ ನೀಡುವ ಚಿಂತನೆಯಲ್ಲಿದ್ದು ಕಾಯ್ದೆ ಜಾರಿಯಾದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದರು.

ಪಿ.ಎಂ. ಕಿಸಾನ್ ಯೋಜನೆಯಲ್ಲಿ ದಾವಣಗೆರೆ ಜಿಲ್ಲೆಗೆ 397 ಕೋಟಿ ಹಣ ಬಂದಿದ್ದು, ಚನ್ನಗಿರಿ ತಾಲ್ಲೂಕಿನ 39 ಸಾವಿರ ರೈತರಿಗೆ 101 ಕೋಟಿ 67 ಲಕ್ಷ ರೈತರ ಖಾತೆಗೆ ಜಮೆಯಾಗುವುದರಂದಿಗೆ ಚನ್ನಗಿರಿ ತಾಲ್ಲೂಕಿಗೆ ಅಗ್ರಪಾಲು ದೊರೆತಿದೆ, ಅದರೊಂದಿಗೆ ಮಾವಿನಕಟ್ಟೆ ಗ್ರಾಮ ಪಂಚಾಯಿತಿಗೆ 8.87 ಕೋಟಿ ವೆಚ್ಚದ ವಿವಿಧ ಅಭಿವದ್ದಿ ಕಾಮಗಾರಿಗಳಾಗಿವೆ. ಮನೆ ಮನೆಗೆ ಗಂಗೆ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ಸಂಪರ್ಕ ಒದಗಿಸಿದ್ದು ಕುಡಿಯುವ ನೀರಿನ ಬವಣೆ ತಪ್ಪಿದೆ, ಹಿಂದಿನ ವರ್ಷಗಳಲ್ಲಿ ತಾಲ್ಲೂಕಿನಾದ್ಯಂತ ನೂರಾರು ಕೊಳವೆ ಬಾವಿಗಳನ್ನು ತೋಡಿಸಲಾಗುತಿತ್ತು, ಈ ಬಾರಿ ಹತ್ತರಿಂದ ಹದಿನೈದು ಬೋರ್‍ಗಳಷ್ಟನ್ನೇ ಕೊರೆಯಿಸಲಾಗಿದೆ ಎಂದರು.

ಮಹಿಳೆಯರು ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಸ್ತ್ರೀ ಶಕ್ತಿ ಸಂಘಗಳಿಗೆ ಅನುದಾನ ನೀಡುತಿದ್ದು, ತಾಲೋಕಿನ 40 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 1.25 ಲಕ್ಷಗಳ ಆರ್ಥಿಕ ನೆರವು ನೀಡಿದೆ. ಕುಟುಂಬದಲ್ಲಿ ಒಂದು ಹೆಣ್ಣು ಮಗಳು ಮನಸು ಮಾಡಿದರೆ ಏನೆಲ್ಲಾ ಸಾಧಿಸಬಹುದೆಂಬ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ, ಜೀವನೋಪಾಯಕ್ಕಾಗಿ ರೊಟ್ಟಿ ಮಾಡುತಿದ್ದ ಹೆಣ್ಣುಮಗಳೊಬ್ಬಳು ಇಂದು ವಿದೇಶಗಳಿಗೆ ರೊಟ್ಟಿ ರಪ್ತು ಮಾಡುತ್ತಿರುವಂತಹ ಉದಾಹರಣೆಗಳಿವೆ ಎಂದರು. ಸರ್ಕಾರ ಇಂತಹ ನೂರಾರು ಯೋಜನೆಗಳನ್ನು ನೀಡಿದ್ದು, ಸರ್ಕಾರ ನೀಡುವ ಹಣಕಾಸಿನ ನೆರವಿನಿಂದ ಮಹಿಳೆಯರು ಸಬಲರಾಗಲು ಸಾಧ್ಯ ಎಂದರು.

ಆಶ್ರಯ ಯೋಜನೆಯಡಿ ಈಗಾಗಲೇ ಮನೆ ಮಂಜೂರಾಗಿರುವ ಮನೆಗಳನ್ನು ಕಟ್ಟಿಸಿಕೊಳ್ಳಿ, ಹೆಚ್ಚಿನ ಅನುದಾನದ ಮನೆ ಬೇಕೆಂದು ಕಾಯ್ದು ಕುಳಿತರೆ ಮಂಜೂರಾಗಿರುವ ಮನೆಯು ಕೈತಪ್ಪುತ್ತದೆ. ಹಾಗೂ ತಾಲ್ಲೂಕಿನಲ್ಲಿ ಸಾಕಷ್ಟು ಯೋಜನೆಗಳಿಂದ ಹಲವರು ಫಲಾನುಭವಿಗಳಾಗಿದ್ದೀರಿ, ತಾಲ್ಲೂಕಿನಲ್ಲಿ 912 ಮಹಿಳೆಯರಿಗೆ ವಿಧವಾ ವೇತನ ಮಂಜೂರು ಮಾಡಲಾಗಿದೆ. ಒಟ್ಟಾರೆಯಾಗಿ ಮಾವಿನಕಟ್ಟೆ ವ್ಯಾಪ್ತಿಯಲ್ಲಿ 4.50 ಕೋಟಿ ವೆಚ್ಚದಲ್ಲಿ ಚತುಷ್ಪತ ರಸ್ತೆ ನಿರ್ಮಿಸುವ ಮೂಲಕ ಈ ಗ್ರಾಮವನ್ನು ಒಂದು ಸುಂದರ ಗ್ರಾಮವನ್ನಾಗಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಸರ್ಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ತಂದು ನಿಲ್ಲಿಸುವಂತಹ ಕಾರ್ಯಕ್ರಮ ಇದಾಗಿದ್ದು ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ನಿಮ್ಮ ಗ್ರಾಮದಲ್ಲಿದ್ದು ನಿಮ್ಮ ಯಾವುದೇ ಕುಂದು ಕೊರತೆ, ಇದುವರರೆಗೂ ಆಗದೇ ಇರುವ ಕೆಲಸವನ್ನು ಮಾಡಿಸಿಕೊಳ್ಳಬಹುದಾಗಿದೆ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗದೆ ನಿಮ್ಮೂರಿನಲ್ಲಿಯೇ ಇರುವ ಗ್ರಾಮ ಒನ್ ಕೇಂದ್ರದಲ್ಲಿ ಯಾವುದೇ ಖರ್ಚು ಇಲ್ಲದೆ ಕೆಲಸ ಮಾಡಿಕೊಳ್ಳಬಹುದಾಗಿದೆ, ಅತಿ ಹೆಚ್ಚು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿರುವ ಈ ಭಾಗದ ಜನರ ಬಳಿಗೆ ಶಾಸಕರು ಜಿಲ್ಲಾಧಿಕಾರಿಗಳು ತಲುಪಬೇಕೆಂಬ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಮಾವಿನಕಟ್ಟೆಯಲ್ಲಿ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಇತರೆ ತಾಲ್ಲೂಕುಗಳಿಗೆ ಮಾದರಿಯಾಗಿದೆ, ಸುಮಾರು 999 ಎಕರೆ ಬಗರ್ ಹುಕುಂ ಜಮೀನನ್ನು 485 ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಗ್ರಾಮ ಒನ್ ಕೇಂದ್ರಗಳಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಕೇವಲ 30 ರೂ. ಗಳಲ್ಲಿ ಮಾಡಿಕೊಳ್ಳಲಾಗುತ್ತದೆ ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ ಮಾತನಾಡಿ, ಜನರು ಜಾಗೃತಿ ಹೊಂದಿ ಸರ್ಕಾರ ರೂಪಿಸಿರುವ ಎಲ್ಲಾ ಯೋಜನೆಗಳನ್ನು ಪಡೆದುಕೊಳ್ಳಬೇಕು, ಹಾಗೆಯೇ ಈ ಹಿಂದೆ ಜಾತಿ ಪ್ರಮಾಣ ಪತ್ರ ಪಡೆಯಲು ತಾಲ್ಲೂಕು ಕಚೇರಿಗಳಿಗೆ ತಿಂಗಳುಗಟ್ಟಲೆ ಅಲೆಯುವಂತಹ ಪರಿಸ್ಥಿತಿ ಇತ್ತು ಈಗ ಗ್ರಾಮ ಒನ್ ಕೇಂದ್ರದ ಮೂಲಕ ಗ್ರಾಮದಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ, ತೋಟಗಾರಿಕೆಗಳಲ್ಲಿ ಕೆಲಸ ಮಾಡಿ ಪ್ರತಿದಿನ 310 ರೂ. ಗಳನ್ನು ಪಡೆಯಬಹುದು ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗರಾಜ್ ಮಾತನಾಡಿ, ಗ್ರಾಮಪಂಚಾಯಿತಿ ಹಾಗೂ ಗ್ರಾಮ ಒನ್ ಕೇದ್ರಗಳಲ್ಲಿ ಆಯುಷ್ಮಾನ ಭಾರತ್ ಕರ್ನಾಟಕ ಆರೋಗ್ಯ ಕಾರ್ಡ್ ಪಡೆದು. ಬಿ.ಪಿ.ಎಲ್ ಕುಟುಂಬದವರಿಗೆ 5 ಲಕ್ಷದವರೆಗೆ ಉಚಿತ ಆರೋಗ್ಯ ತಪಾಸಣೆ ಇರುತ್ತದೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಮಾಹಿತಿ ನೀಡಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್ ಮಾತನಾಡಿ, ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಒಂದುವರೆ ಎಕರೆಯಿಂದ ಐದು ಎಕರೆ ಜಮೀನು ಹೊಂದಿದವರಿಗೆ ಕೊಳವೆಬಾವಿ ಕೊರೆದು ವಿದ್ಯುದೀಕರಣ ಮಾಡಿ ಕೊಡಲಾಗುತ್ತದೆ. ಹಾಗೂ ಭೂ ಒಡೆತನ ಯೋಜನೆಯು ಸರ್ಕಾರದ ನೂತನ ಯೋಜನೆಯಾಗಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 2 ಎಕರೆ ಜಮೀನನ್ನು ಕೊಡಿಸುವಂತಹ ಯೋಜನೆಯಾಗಿದೆ ಎಂದರು.
ತಹಶೀಲ್ದಾರ್ ಪಟ್ಟರಾಜು ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಜಿಲ್ಲಾಧಿಕಾರಿಗಳು ಮಾವಿನಕಟ್ಟೆ ಗ್ರಾಮದಲ್ಲಿನ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ಕೆಲಸ ನಿರ್ವಹಿಸಿ ಹಾಗೂ ಆಯುಷ್ಮಾನ್ ಆರೋಗ್ಯ ಕಾರ್ಡ್ ಮಾಡಿಕೊಡಿ ಎಂದು ಆಪರೇಟರ್ ಸಂಜೀವನಾಗ್ ಅವರಿಗೆ ಸೂಚಿಸಿದರು.

ವೇದಿಕೆಯಲ್ಲಿ ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್, ಭೂಸ್ವಾಧಿನಾಧಿಕಾರಿ ರೇಷ್ಮ ಹಾನಗಲ್, ತಾ.ಪಂ. ಇಓ ಪ್ರಕಾಶ್, ಡಿವೈಎಸ್ಪಿ ಸಂತೋಷ್ ನಿರ್ಮಿತಿ ಕೇಂದ್ರದ ರವಿಕುಮಾರ್, ಹಾಗೂ ಗ್ರಾ.ಪಂ ಅಧ್ಯಕ್ಷರು ಸದಸ್ಯರು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮದ ಜನರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending