ದಿನದ ಸುದ್ದಿ
ದಾವಣಗೆರೆ | ಶಿಷ್ಯವೇತಕ್ಕಾಗಿ ಪಟ್ಟು ಬಿಡದ ವೈದ್ಯಕೀಯ ವಿದ್ಯಾರ್ಥಿಗಳು : 10 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಸುದ್ದಿದಿನ,ದಾವಣಗೆರೆ : ನಗರದ ಜಯದೇವ ಸರ್ಕಲ್ ನಲ್ಲಿ ಶಿಷ್ಯವೇತಕ್ಕಾಗಿ ಜೆಜೆಎಂ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ಮತ್ತು ಗೃಹ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ ಬುಧವಾರ ಹತ್ತನೇದಿನಕ್ಕೆ ಕಾಲಿಟ್ಟಿದೆ. ಈ ಹಿಂದೆ ವೈದ್ಯ ವಿದ್ಯಾರ್ಥಿಗಳು ಮತ್ತು ಸರ್ಕಾರದ ನಡುವೆ ನಡೆದ ಸಂಧಾನಗಳೆಲ್ಲಾ ವಿಫಲವಾಗಿದ್ದು, ಶಿಷ್ಯವೇತನದ ಪಡೆಯದೆ ನಾವು ಮುಷ್ಕರ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
230 ವಿದ್ಯಾರ್ಥಿಗಳ 16 ತಿಂಗಳ 8 ಕೋಟಿ ಶಿಷ್ಯವೇತನ ಬಾಕಿಯಿದ್ದು, ಜೆಜೆಎಂ ಕಾಲೇಜು ಆಡಳಿತ ಮಂಡಳಿ ಮತ್ತು ಸರ್ಕಾರದ ಹಗ್ಗ ಜಗ್ಗಾಟದ ನಡುವೆ ವಿದ್ಯಾರ್ಥಿಗಳ ಬದುಕು ಬೀದಿಗೆ ಬಂದಿದೆ. ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬಗಳ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಹಲವು ಕನಸುಗಳನ್ನು ಕಟ್ಟಿಕೊಂಡು ಬಂದಿದ್ದ ವಿದ್ಯಾರ್ಥಿಗಳು 16 ತಿಂಗಳು ಕಾಲ ಶಿಷ್ಯವೇತನ ಪಡೆಯದೆ ಪುಸ್ತಕಗಳು, ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಅಗತ್ಯ ವಸ್ತುಗಳನ್ನು ಕೊಳ್ಳಲು ಹಣವಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊರೋನಾ ಸಂಕಷ್ಟದಲ್ಲಿ ಕೆಲವು ವಿದ್ಯಾರ್ಥಿಗಳು ಕೊರೋನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇವರ ಸಂಕಷ್ಟಕ್ಕೆ ಸರ್ಕಾರ ಮತ್ತು ಆಡಳಿತ ಮಂಡಳಿ ಸ್ಪಂದಿಸದೇ ಇರುವುದು ವಿದ್ಯಾರ್ಥಿಗಳಲ್ಲಿ ಬೇಸರ ಮೂಡಿಸಿದೆ. ಸಧ್ಯ ಮಳೆ ಆರಂಭವಾಗಿದ್ದು ಮಳೆಯನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದಾರೆ. ಭಿಕ್ಷೆ ಬೇಡುವ ಮೂಲಕ ಪ್ರತಿಭಟನೆ ಆರಂಭ ಮಾಡಿದ ಇವರು, ಮಂಗಳವಾರ ನಾಟಕ ರೂಪಕಗಳ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.
ಸಚಿವರು ಹೀಗೆ ಬಂದು ಹಾಗೆ ಹೋದ್ರು
ಜುಲೈ 4 ರಂದು ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಅವರು “ಮುಖ್ಯಮಂತ್ರಿಗಳು ಹಾಗೂ ವೈದ್ಯಕೀಯ ಸಚಿವರೊಂದಿಗೆ ಈ ಕುರಿತು ಸಭೆ ನಡೆಸಿ ಚರ್ಚಿಸಲಾಗಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
ಹಾಗೂ ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯವೇತನ ಭರಿಸಬೇಕೆಂದು ಮುಖ್ಯಮಂತ್ರಿಗಳು ತಿಳಿಸಿರುವ ಪ್ರಕಾರ ಆಡಳಿತ ಮಂಡಳಿಯವರು ಒಪ್ಪಿಕೊಂಡಿರುತ್ತಾರೆ. ಸೋಮವಾರದ (ಜುಲೈ 06) ನಂತರ ಗೃಹವೈದ್ಯರಿಗೆ ಶಿಷ್ಯವೇತನವನ್ನು ಶೀಘ್ರವಾಗಿ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.
ಆದರೆ ಜೆಜೆಎಂ ಕಾಲೇಜಿನ ಆಡಳಿತ ಮಂಡಳಿ ನಾವು ಶಿಷ್ಯವೇತನ ಕೊಡಲು ಆಗುವುದಿಲ್ಲ ಎಂದು ಮನವಿ ಮಾಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಸರ್ಕಾರ ಯಾವ ಪ್ರತಿಕ್ರಿಯೆಯನ್ನು ನೀಡಿಲ್ಲ.
ಶಿಷ್ಯ ವೇತನ ನೀಡದಿದ್ದರೂ ಕೋವಿಡ್ ಆಸ್ಪತ್ರೆಯಲ್ಲಿ ಸೇವೆ
ಸರ್ಕಾರ ಶಿಷ್ಯ ವೇತನ ನೀಡದಿದ್ದರು ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೇ 16 ತಿಂಗಳ ಶಿಷ್ಯವೇತನ ನೀಡದೆ ಸರ್ಕಾರ ಸತಾಯಿಸುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಮಳೆಯ ನಡುವೆಯೂ ಪ್ರತಿಭಟನೆ
ನಗರದಲ್ಲಿ ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಯ ನಡುವೆಯೂ ಪ್ರತಿಭಟನೆ ಮುಂದುವರಿದ್ದು, ಲಿಖಿತ ರೂಪದಲ್ಲಿ ಸರ್ಕಾರ ಹೇಳಿಕೆ ಕೊಡುವವರೆಗೂ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ17 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ16 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


