ದಿನದ ಸುದ್ದಿ

ದಾವಣಗೆರೆ | ಡಿ.27 ರಂದು ಉದ್ಯೋಗ ಮೇಳ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ಡಿ.27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ, ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಪಿಯುಸಿ, ಐ.ಟಿ.ಐ. ಡಿಪ್ಲೊಮಾ (ಮೆಕ್ಯಾನಿಕಲ್) ಬಿ.ಎ, ಬಿ.ಎಸ್‍ಸಿ, ಬಿ.ಸಿ.ಎ, ಬಿ.ಬಿ.ಎಂ, ಬಿ.ಬಿ.ಎ, ಬಿ.ಕಾಂ, ಬಿ.ಎಸ್‍ಸಿ (ನರ್ಸಿಂಗ್), ಎಂ.ಬಿ.ಎ ಹಾಗೂ ಎಂ.ಕಾಂ ಪದವಿ ಹೊಂದಿದ ಅಭ್ಯರ್ಥಿಗಳನ್ನು ಉದ್ಯೋಗ ಮೇಳದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಹ ಅಭ್ಯರ್ಥಿಗಳು ಡಿ.27 ರಂದು ಬೆಳಿಗ್ಗೆ 10.00 ಗಂಟೆಗೆ 10 ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ಪಿ.ಬಿ. ರೋಡ್, ದಾವಣಗೆರೆ, ಇಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 08192-259446 ಮತ್ತು ಮೊ.ನಂ 6361550016, 7406323294 ಗೆ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version