Connect with us

ದಿನದ ಸುದ್ದಿ

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

Published

on

  • ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ

ಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ಯುವಜನತೆ ನಿರುದ್ಯೋಗ ಎಂಬ ದೊಡ್ಡ ಸವಾಲನ್ನು ಎದುರಿಸುತ್ತಿದ್ದಾರೆ. ಅದನ್ನು ನಿವಾರಿಸುವ ಒಂದು ಮಹತ್ವದ ಹೆಜ್ಜೆಯಾಗಿ, ದಾವಣಗೆರೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು. ದಿನಾಂಕ 15.03.2025 ರಂದು ಐ.ಟಿ.ಐ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳವು 50ಕ್ಕೂ ಹೆಚ್ಚು ಖ್ಯಾತ ಕಂಪನಿಗಳನ್ನು ಒಳಗೊಂಡಿದ್ದು, ಯುವಕರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಿ ಉದ್ಯೋಗ ಗಳಿಸಿಕೊಳ್ಳಲು ಸುವರ್ಣಾವಕಾಶ ಒದಗಿಸುತ್ತದೆ. ಜಿಲ್ಲಾಡಳಿತವು ಈ ಮೇಳವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುತ್ತದೆ.

ನಿರುದ್ಯೋಗ – ಯುವಕರ ಮುಂದಿರುವ ದೊಡ್ಡ ಸವಾಲು

ಇಂದಿನ ಯುಗದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದರೂ ಉದ್ಯೋಗ ದೊರಕುವುದು ಸುಲಭವಲ್ಲ. ಆರ್ಥಿಕ ಪರಿಸ್ಥಿತಿಗಳು, ಉದ್ಯೋಗ ಕ್ಷೇತ್ರದ ಸ್ಪರ್ಧಾತ್ಮಕತೆಯು ಯುವಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವೊಮ್ಮೆ ಸರಿಯಾದ ಮಾರ್ಗದರ್ಶನದ ಕೊರತೆ, ಉದ್ಯೋಗಾವಕಾಶಗಳ ಬಗ್ಗೆ ಸರಿಯಾದ ಮಾಹಿತಿ ಲಭ್ಯವಿಲ್ಲದಿರುವುದು, ಇವುಗಳು ನಿರುದ್ಯೋಗದ ಪ್ರಮಾಣವನ್ನು ಹೆಚ್ಚಿಸುತ್ತವೆ.

ಈ ಹಿನ್ನೆಲೆಯಲ್ಲಿ, ಉದ್ಯೋಗ ಮೇಳಗಳು ಕಂಪನಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು, ಉದ್ಯೋಗ ಅವಕಾಶಗಳ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯಲು ಮತ್ತು ತಕ್ಷಣವೇ ಉದ್ಯೋಗ ಆಫರ್ ಪಡೆಯಲು ಅವಕಾಶ ನೀಡುವ ವಿಶಿಷ್ಟ ವೇದಿಕೆಗಳಾಗಿವೆ.

ಉದ್ಯೋಗ ಮೇಳ – ನಿರುದ್ಯೋಗಕ್ಕೆ ಪರಿಹಾರ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ

ಉದ್ಯೋಗ ಮೇಳಗಳು ವಿದ್ಯಾರ್ಥಿಗಳು ಮತ್ತು ಉದ್ಯೋಗದಾತರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸುತ್ತವೆ. ಈ ಮೇಳದಲ್ಲಿ ಭಾಗವಹಿಸುವುದು ನಿಮ್ಮ ಭವಿಷ್ಯಕ್ಕಾಗಿ ಬಹುಮುಖ್ಯವಾದ ಒಂದು ಹೆಜ್ಜೆ ಆಗಿರಬಹುದು. ಇದು ನಿಮಗೆ ಪ್ರತ್ಯಕ್ಷ ಸಂದರ್ಶನ, ಕಂಪನಿಗಳಿಂದ ಉದ್ಯೋಗ ಮಾಹಿತಿಗಳು, ಉದ್ಯೋಗ ತಂತ್ರಗಳು ಮತ್ತು ಮಾರ್ಗದರ್ಶನ ಪಡೆಯಲು ಅದ್ಭುತ ಅವಕಾಶ ಒದಗಿಸುತ್ತದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕಾರಣಗಳು

  • 50+ ಕಂಪನಿಗಳು ಭಾಗವಹಿಸುತ್ತಿವೆ – ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಂದ ಉದ್ಯೋಗ ಅವಕಾಶಗಳು.
  • ತಕ್ಷಣದ ಅವಕಾಶ – ಒಂದು ದಿನದಲ್ಲಿ ಉದ್ಯೋಗ ದೊರಕಿಸಿಕೊಳ್ಳುವ ಅವಕಾಶ.
  • ನೇರ ಸಂದರ್ಶನ – ಕಂಪನಿಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶ.
  • ಉಚಿತ ಪ್ರವೇಶ – ಯಾವುದೇ ಶುಲ್ಕವಿಲ್ಲದೆ ಭಾಗವಹಿಸಲು ಅವಕಾಶ.
  • ಮಾರುಕಟ್ಟೆ ಪ್ರವೃತ್ತಿ ತಿಳಿಯಲು ಅವಕಾಶ – ಉದ್ಯೋಗ ಕ್ಷೇತ್ರದ ಹೊಸ ಹಾದಿಗಳನ್ನು ಅರಿಯಲು ಉತ್ತಮ ವೇದಿಕೆ.

ನೀವು ಮಾಡಬೇಕಾದ ಸಿದ್ಧತೆಗಳು

ಪ್ರಮುಖ ದಾಖಲೆಗಳು: ನಿಮ್ಮ ಸ್ವವಿವರ (Resume), ಅಂಕಪತ್ರಗಳು, ಗುರುತು ಪತ್ರ (Aadhar/PAN), ಪಾಸ್‌ಪೋರ್ಟ್ ಸೈಜ್ ಫೋಟೋಗಳು ಇತ್ಯಾದಿಗಳನ್ನು ಸಿದ್ಧಪಡಿಸಿಕೊಳ್ಳಿ.

ಸಮಯ ಪಾಲನೆ: ಮೇಳದ ಪ್ರಾರಂಭದ ಸಮಯಕ್ಕೆ ಮುಂಚೆ ಆಗಮಿಸಿ, ಇದರಿಂದ ನೀವು ಹೆಚ್ಚಿನ ಕಂಪನಿಗಳ ಸಂದರ್ಶನಗಳಿಗೆ ಹಾಜರಾಗಬಹುದು.

ಆತ್ಮವಿಶ್ವಾಸ: ಸಂದರ್ಶನಕ್ಕೆ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದೊಂದಿಗೆ ನಿಮ್ಮನ್ನು ತೋರಿಸಿಕೊಳ್ಳಿ.

ಸಂಶೋಧನೆ: ಭಾಗವಹಿಸುವ ಕಂಪನಿಗಳ ಬಗ್ಗೆ ಮೊದಲೇ ಮಾಹಿತಿ ಪಡೆದುಕೊಳ್ಳಿ, ಇದರಿಂದ ಉತ್ತಮ ಪ್ರಭಾವ ಬೀರುವ ಅವಕಾಶ ಲಭ್ಯವಿರುತ್ತದೆ.

ಯಾರೆಲ್ಲ ಭಾಗವಹಿಸಬಹುದು

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 18ರಿಂದ 35 ವರ್ಷದ ಒಳಗಿನವರಾಗಿರಬೇಕು ಎಂಟನೇ ತರಗತಿ ಎಸ್ ಎಸ್ ಎಲ್ ಸಿ ಪಿಯುಸಿ ಬಿಎ ಬಿಕಾಂ ಬಿ ಎಸ್ ಸಿ ಐ ಟಿ ಐ ಡಿಪ್ಲೋಮಾ ಬಿ.ಟೆಕ್ ಎಂ ಬಿ ಎ ಎಂಕಾಂ ಎಂ ಸಿ ಎ ಹಾಗೂ ಇತರ ಸ್ನಾತಕೋತ್ತರ ಪದವಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಲು ಅರ್ಹರು.

ಯಾವೆಲ್ಲ ಕ್ಷೇತ್ರಗಳು ಭಾಗವಹಿಸುತ್ತವೆ

ಉದ್ಯೋಗ ಮರದಲ್ಲಿ ಐಟಿ ವಲಯ ಹಣಕಾಸು ಬ್ಯಾಂಕಿಂಗ್ ಉತ್ಪಾದನಾ ವಲಯ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಫಾರ್ಮಸಿಟಿಕಲ್ ಬಿಪಿಓ ವಾಯ್ಸ್ ಬೇಸ್ಡ್ ರಿಟೇಲ್ ಸೇಲ್ಸ್ ಅಂಡ್ ಮಾರ್ಕೆಟಿಂಗ್ ಆಟೋ ಮೊಬೈಲ್ ಡೇಟಾ ಎಂಟ್ರಿ ಆಪರೇಟರ್ ಸರ್ವಿಸ್ ಸೆಕ್ಟರ್ ಇತರೆ ಕ್ಷೇತ್ರಗಳಲ್ಲಿ ಉದ್ಯೋಗ ನೀಡುವ ಕಂಪನಿಗಳು ಭಾಗವಹಿಸುತ್ತಿವೆ

ಭಾಗವಹಿಸಿ, ಭವಿಷ್ಯ ಕಟ್ಟಿಕೊಳ್ಳಿ..!

ನೀವು ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿ ಅಥವಾ ಬೇರೊಂದು ಉದ್ಯೋಗದ ಅವಕಾಶಕ್ಕಾಗಿ ಹುಡುಕಾಟದಲ್ಲಿರುವವರೆ, ಈ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಿಮ್ಮ ಭವಿಷ್ಯ ರೂಪಿಸುವ ಒಂದು ಸುವರ್ಣ ಅವಕಾಶ. ಇದು ನಿಮ್ಮ ಪ್ರಾರಂಭಿಕ ಹಂತದ ಉದ್ಯೋಗವನ್ನು ಪಡೆಯಲು ಸಹಾಯ ಮಾಡುವಷ್ಟೇ ಅಲ್ಲ, ಉದ್ಯೋಗ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುತ್ತದೆ.

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಇದನ್ನು ಸುಲಭವಾಗಿಸುವ ಒಂದು ಅವಕಾಶ ನಿಮ್ಮ ಮುಂದೆ ಬಂದಿರುವಾಗ, ಅದನ್ನು ಉಪಯೋಗಿಸಿಕೊಳ್ಳುವುದು ಬುದ್ಧಿಮತ್ತೆಯಾಗಿದೆ. ಆದ್ದರಿಂದ, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ನಿಮ್ಮ ಕನಸುಗಳತ್ತ ಹೆಜ್ಜೆ ಹಾಕಿ!

“ಯಶಸ್ಸು ನಿಮ್ಮ ಕೈತುಂಬ ಬೇಕಾದರೆ, ಅವಕಾಶಗಳನ್ನು ಪತ್ತೆ ಹಚ್ಚಿ, ಭಾಗವಹಿಸಿ ಮತ್ತು ನಿಮ್ಮ ಸಾಂದರ್ಭಿಕತೆಯನ್ನು ಸದುಪಯೋಗಪಡಿಸಿಕೊಳ್ಳಿ!”

ಮತ್ತು, ಜತೆಯಾಗಿ ಬನ್ನಿ… ಭಾಗವಹಿಸಿ… ಉದ್ಯೋಗ ಪಡೆಯಿರಿ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending