Connect with us

ದಿನದ ಸುದ್ದಿ

ದಾವಣಗೆರೆ | ಮಾ.22 ರಂದು ಉದ್ಯೋಗ ಮೇಳ

Published

on

ಸುದ್ದಿದಿನ,ದಾವಣಗೆರೆ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ದಾವಣಗೆರೆ ಇವರ ವತಿಯಿಂದ ಮಾ.22 ರಂದು ಯು.ಬಿ.ಡಿ.ಟಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಯುವಕ-ಯುವತಿಯರು ಭಾಗವಹಿಸಲು ಗೂಗಲ್ ಪೋರಂ ಲಿಂಕ್ https://tinyurl.com/bdafha6m ನಲ್ಲಿ ಮಾಹಿತಿಯನ್ನು ಭರ್ತಿಗೊಳಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 8971749636 ಹಾಗೂ ಇಮೇಲ್ ವಿಳಾಸ dsmodvg@gmail.com ಅಥವಾ ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ 24, ಬಿ ಬ್ಲಾಕ್, ಪಿ.ಬಿ ರಸ್ತೆ ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending