ದಿನದ ಸುದ್ದಿ

ದಾವಣಗೆರೆಯಲ್ಲಿ‌ ಇಂದು ಉದ್ಯೋಗ ಮೇಳ

Published

on

ಸುದ್ದಿದಿನ, ದಾವಣಗೆರೆ : ಇಂದು ಬೆಳಿಗ್ಗೆ 10ಗಂಟೆ ಯಿಂದ ಸಂಜೆ 3ಗಂಟೆಯ ವರೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇಲ್ಲಿ “ಉದ್ಯೋಗ ಮೇಳ”ವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಎಜು ಬ್ರಡ್ಜ್ ಶಿವಮೊಗ್ಗ, ಇಂಟೆಲಿಜೆನ್ಸ್ ಸೆಕ್ಯೂರಿಟಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಆಪ್ಟಿಮಾ ವೆಂಚರ್ಸ್ ದಾವಣಗೆರೆ, ಮುಂತಾದ ಕಂಪನಿಗಳು ಭಾಗವಹಿಸಲಿವೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲಮೋ ಹಾಗೂ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ, ಬಿ.ಬಿ.ಎಂ. ತೇರ್ಗಡೆಯಾದ ಅಭ್ಯರ್ಥಿಗಳನ್ನು ನೇಮಾತಿ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಬೆಳಿಗ್ಗೆ 10 ಗಂಟೆಗೆ ತಮ್ಮ ಬಯೋಡಾಟಾ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿಯ ಪ್ರಮಾಣ ಪತ್ರಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ ಕೊಠಡಿ ಸಂಖೆ: 51, ಕರೂರು ಇಂಡಸ್ಟ್ರಿಯಲ್ ಏರಿಯಾ ಪಿ ಬಿ ರಸ್ತೆ ದಾವಣಗೆರೆ ಇಲ್ಲಿ ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗೆ- 08192259446 ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version