ದಿನದ ಸುದ್ದಿ

ಕೊಪ್ಪಳದಲ್ಲಿ ಬೃಹತ್ ಉದ್ಯೋಗ ಮೇಳ | ಭಾಗವಹಿಸಲಿವೆ ನೂರಾರು ಪ್ರತಿಷ್ಠಿತ ಸಂಸ್ಥೆಗಳು, ನಿರುದ್ಯೋಗಿಗಳಿಗೆ ಒಂದು ಸುವರ್ಣಾವಕಾಶ !

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮಾರ್ಚ್ 14 ರಂದು ಉದ್ಯೋಗಾಕಾಂಕ್ಷಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಅವರು ಹೊಂದಿರುವ ವಿದ್ಯಾರ್ಹತೆಗೆ ಅನುಗುಣವಾಗಿ ಉತ್ತಮ ಉದ್ಯೋಗವಕಾಶ ಪಡೆಯಲು ಉದ್ಯೋಗಾ ಕಾಂಕ್ಷಿಗಳು ಮತ್ತು ನಿಯೋಜಕರನ್ನು ಒಂದೇ ವೇದಿಕೆಯಲ್ಲಿ ತರಲು ಉದ್ಯೋಗ ಮೇಳದ ಗುರಿಯಾಗಿದೆ.

150ಕ್ಕೂ ಹೆಚ್ಚು ಕಂಪನಿಗಳು ಭಾಗಿ

ಬೆಂಗಳೂರು, ಮೈಸೂರು,ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಸ್ಥಳೀಯ ಮಟ್ಟದ ಒಟ್ಟಾರೆ 150 ಉದ್ಯೋಗದಾತರು (ಕಂಪನಿಗಳು) ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ.

ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆ

ಈ ಉದ್ಯೋಗ ಮೇಳದಲ್ಲಿ 18 ರಿಂದ 35 ವರ್ಷದ ವಯೋಮಿತಿಯಲ್ಲಿರುವ ಅವಿದ್ಯಾವಂತರು ಮತ್ತು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ, ವಿವಿಧ ಪದವಿ, ಎಂ.ಬಿ.ಎ, ಎಂ.ಟೆಕ್, ವಿವಿಧ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪುರುಷ ಮತ್ತು ಮಹಿಳಾ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿದೆ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿ :

http://117.220.197.248/jobfair_koppal/

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವ ಉದ್ಯೋಗಾ ಕಾಂಕ್ಷಿಗಳಿಗೆ ಈಗಾಗಲೇ ಕೊಪ್ಪಳ ಜಿಲ್ಲಾಡಳಿತದಿಂದ ಅನಾವರಣಗೊಳಿಸಲಾಗಿರುವ ಜಾಲತಾಣ https:/koppal.nic.in/ ನಲ್ಲಿ ನೋಂದಾಯಿಸಲು ಅವಕಾಶ
ಕಲ್ಪಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಕರೆಮಾಡಿ

ಮೊಬೈಲ್ : 8105848991- 7022694905

ಸಮಿತಿ ರಚನೆ

ಉದ್ಯೋಗ ಮೇಳದ ಯಶಸ್ವಿಗಾಗಿ ವೇದಿಕೆ ಸಮಿತಿ, ಆಹಾರ ಸಮಿತಿ, ಸಾರಿಗೆ ಸಮಿತಿ, ಆರೋಗ್ಯ ಸಮಿತಿ, ಭದ್ರತಾ ಸಮಿತಿ, ನೋಡಲ್ ಅಧಿಕಾರಿಗಳ ಸಮಿತಿ ಸೇರಿದಂತೆ 12 ಸಮಿತಿಗಳನ್ನು ರಚಿಸಲಾಗುವುದು. ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending

Exit mobile version