ದಿನದ ಸುದ್ದಿ

ಕೊಪ್ಪಳ | ಮಾರ್ಚ್14 ಮತ್ತು 15 ಕ್ಕೆ ಉದ್ಯೋಗ ಮೇಳ ; ಪೋಸ್ಟರ್ ಬಿಡುಗಡೆ : ಕೂಡಲೇ ನೋಂದಾಯಿಸಿಕೊಳ್ಳಿ

Published

on

ಸುದ್ದಿದಿನ,ಕೊಪ್ಪಳ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಇದರ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಪೋಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಿದರು.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿ

ಪೋಸ್ಟರ್ ಬಿಡುಗಡೆ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ
ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಲು ಕೊಪ್ಪಳ ಜಿಲ್ಲೆಯ ಜಾಲತಾಣ
http://117.220.197.248/jobfair_koppal/ , www.koppal.nic.in ನಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು ಎಂದು.

ಉದ್ಯೋಗ ಮೇಳದಲ್ಲಿ 150 ಕ್ಕೂ ಹೆಚ್ಚು ಸಂಖ್ಯೆಯ ಕಂಪನಿಗಳು ಭಾಗವಹಿಸುತ್ತಿದ್ದು ಆಸಕ್ತರು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ತಹಶೀಲ್ದಾರ್ ಜೆ.ಬಿ. ಮಜ್ಜಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಉದ್ಯೋಗ ಮೇಳದ ಹೆಚ್ಚಿನ ಮಾಹಿತಿಗೆ ಕರೆಮಾಡಿ

ಮೊಬೈಲ್ : 8105848991- 7022694905

ವಿಡಿಯೋ ನೋಡಿ

https://youtu.be/m1LZakJ9KBs

Trending

Exit mobile version