Connect with us

ದಿನದ ಸುದ್ದಿ

ಕೊಪ್ಪಳ ಉದ್ಯೂಗ ಮೇಳ | ಸಮಿತಿಗಳು ಅಚ್ಚುಕಟ್ಟಾಗಿ ಜವಾಬ್ದಾರಿ ನಿರ್ವಹಿಸಿ : ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸೂಚನೆ

Published

on

ಸುದ್ದಿದಿನ,ಕೊಪ್ಪಳ: ಉದ್ಯೋಗ ಮೇಳದ ಯಶಸ್ವಿ ನಿರ್ವಹಣೆಗೆ ರಚಿಸಲಾಗಿರುವ ಸಮಿತಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮತ್ತು ಕಂಪನಿಗಳಿಗೆ ಗೊಂದಲ ಉಂಟಾಗದಂತೆ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಉದ್ಯೋಗ ಮೇಳದ ಅಂಗವಾಗಿ ರಚಿಸಿರುವ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಿತಿಗಳ ಕರ್ತವ್ಯ ಹಾಗೂ ಜವಾಬ್ದಾರಿ

ಇದೇ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಯೋಗ ಮೇಳದ ಯಶಸ್ವಿ ನಿರ್ವಹಣೆಗೆ ವೇದಿಕೆ ಸಮಿತಿ, ನೋಂದಣಿ ಕೌಂಟರ್‌ಗಳ ಮೇಲ್ವಿಚಾರಣೆ ಸಮಿತಿ, ಆಹಾರ ಸಮಿತಿ, ಸಾರಿಗೆ ಸಮಿತಿ, ಆರೋಗ್ಯ ಸಮಿತಿ, ಭದ್ರತಾ ಸಮಿತಿ, ವಿದ್ಯುತ್ ಸರಬರಾಜು ಸಮಿತಿ, ಮಾಧ್ಯಮ ಸಮಿತಿ, ವಾಹನ ನಿಲುಗಡೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಆಹಾರ ಕೌಂಟರ್ ಸಮಿತಿ, ಆಮಂತ್ರಣ ಪತ್ರಿಕೆ ಸಮಿತಿ ಹಾಗೂ ಸಂಘಟಣಾ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತಮ ವೇದಿಕೆ ನಿರ್ಮಾಣ, ನೋಂದಣಿ ಕೌಂಟರ್‌ಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ತೆರೆದಿರುವ ಕೌಂಟರ್‌ಗಳಲ್ಲಿ ಯಾವುದೇ ಗದ್ದಲ, ಗಲಾಟೆ ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಕಲ್ಪಿಸಬೇಕು.

ಸಾರಿಗೆ ಸಮಿತಿಯವರು ಜಿಲ್ಲಾ ಬಸ್ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣದಿಂದ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಆರೋಗ್ಯ ಸಮಿತಿಯವರು ಜಿಲ್ಲಾ ಕ್ರೀಡಾಂಗಣದ ವ್ಯಾಪ್ತಿಯಲ್ಲಿ ತುರ್ತು ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಹಾಗೂ ಕ್ರೀಡಾಂಗಣದಲ್ಲಿ ಪ್ರಥಮ ಚಿಕಿತ್ಸೆ ಕೇಂದ್ರವನ್ನು ತೆರೆಯುವುದರ ಜೊತೆಗೆ ನುರಿತ ವೈದ್ಯರು ಹಾಗೂ ಶುಶ್ರೂಷಕಿಯರನ್ನು ನಿಯೋಜಿಸಬೇಕು.

ವಾಹನ ನಿಲುಗಡೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಆಹಾರ ಕೌಂಟರ್ ಸಮಿತಿಯವರು ಕ್ರೀಡಾಂಗಣದ ಹೊರಭಾಗದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಂಚಾರಿ ಕ್ಯಾಂಟಿನ್ ಮೂಲಕ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ವ್ಯವಸ್ಥೆ ಕಲ್ಪಿಸಲು ಕೌಂಟರ್ ತೆರೆಯಬೇಕು. ಸಂಘಟಣಾ ಮತ್ತು ಮೇಲುಸ್ತುವಾರಿ ಸಮಿತಿಯು ಉದ್ಯೋಗ ಮೇಳದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಹಾಗೂ ಉದ್ಯೋಗ ಮೇಳದ ಸಂಪೂರ್ಣ ಮೇಲುಸ್ತುವಾರಿಯನ್ನು ನಿರ್ವಹಿಸಬೇಕು ಎಂದು ಅವರು ಸಮಿತಿಗಳ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ತಿಳಿಸಿದರು.

ನೋಂದಾಯಿಸಿ ಕೊಳ್ಳಲು ಕೆಳಗಿನ ಲಿಂಜ್ ಮೇಲೆ ಕ್ಲಿಕ್ ಮಾಡಿ

http://117.220.197.248/jobfair_koppal/

ಕೊಪ್ಪಳ ಜಿಲ್ಲಾ ಜಾಲತಾಣ www.koppal.nic.in ನಲ್ಲಿ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಳ್ಳಬೇಕು. ಇದುವರೆಗೂ 600 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಪ್ರಚಾರಕ್ಕಾಗಿ ಉದ್ಯೋಗ ಮೇಳದ ಪೋಸ್ಟರ್‌ಗಳನ್ನು, ಕರಪತ್ರಗಳನ್ನು ವಿತರಿಸಲಾಗಿದೆ. ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಉದ್ಯೋಗಾಕಾಂಕ್ಷಿಗಳನ್ನು ನೋಂದಣಿ ಮಾಡಿಸುವಂತೆ ಸೂಚಿಸಲಾಗಿದೆ.

ಪದವಿ ಕಾಲೇಜುಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಮಾಹಿತಿ ನೀಡಿ ಅವರಿಂದಲೂ ನೋಂದಣಿ ಮಾಡಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸುವಂತೆ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ 150 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 100 ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುತ್ತದೆ. ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಉದ್ಯೋಗ ಮೇಳದ ಹೆಚ್ಚಿನ ಮಾಹಿತಿಗೆ ಕರೆಮಾಡಿ

ಮೊಬೈಲ್ : 8105848991- 7022694905

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಗವಿಶಂಕರ್ ಕೆ., ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್. ಹಟ್ಟಪ್ಪ, ಜಿಲ್ಲಾ ಮಾಹಿತಿ ಅಧಿಕಾರಿ ಬಸವರಾಜ, ಪೌರಾಯುಕ್ತರಾದ ಮಂಜುನಾಥ ಟಿ.ಎ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಎನ್.ಜಿ. ಕನಕರೆಡ್ಡಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಶಶಿಧರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

ದಿನದ ಸುದ್ದಿ

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

Published

on

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.

ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.

ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending