ದಿನದ ಸುದ್ದಿ
ಕೊಪ್ಪಳ | ಮಾರ್ಚ್14 ಮತ್ತು 15 ಕ್ಕೆ ಉದ್ಯೋಗ ಮೇಳ ; ಕೂಡಲೇ ನೋಂದಾಯಿಸಿಕೊಳ್ಳಿ
ಸುದ್ದಿದಿನ,ಕೊಪ್ಪಳ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ನಿರುದ್ಯೋಗಿಗಳು ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿ :http://117.220.197.248/jobfair_koppal/
www.koppal.nic.in ನಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು ಎಂದು.
ಉದ್ಯೋಗ ಮೇಳದಲ್ಲಿ 150 ಕ್ಕೂ ಹೆಚ್ಚು ಸಂಖ್ಯೆಯ ಕಂಪನಿಗಳು ಭಾಗವಹಿಸುತ್ತಿದ್ದು ಆಸಕ್ತರು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಉದ್ಯೋಗ ಮೇಳದ ಹೆಚ್ಚಿನ ಮಾಹಿತಿಗೆ ಕರೆಮಾಡಿ
ಮೊಬೈಲ್ : 8105848991- 7022694905