ದಿನದ ಸುದ್ದಿ
ಡಿ.21ರಂದು ಉದ್ಯೋಗ ಮೇಳ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/06/Job-fair-davangre-suddidina.jpg&description=ಡಿ.21ರಂದು ಉದ್ಯೋಗ ಮೇಳ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/06/Job-fair-davangre-suddidina.jpg&description=ಡಿ.21ರಂದು ಉದ್ಯೋಗ ಮೇಳ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಮಂಡ್ಯ : ಕಳೆದ ಬಾರಿ ನಡೆದ ಎರಡು ಉದ್ಯೋಗ ಮೇಳವು ಬಹಳ ಯಶಸ್ವಿಯಾಗಿ ನಡೆಯುವುದರ ಮೂಲಕ 700 ಕುಟುಂಬಗಳಿಗೆ ದಾರಿ ದೀಪವಾಗಿದೆ. ಅದರಂತೆ ಈ ಬಾರಿ ಆಯೋಜಿಸಲಿರುವ ಉದ್ಯೋಗ ಮೇಳದಲ್ಲಿ ಕನಿಷ್ಠ 2 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ನಗರಸಭೆ ಮಂಡ್ಯ ಇವರ ವತಿಯಿಂದ ಡಿಸೆಂಬರ್ 21 ರಂದು ನಗರದ ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಮಂಡ್ಯ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಲಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಂಡ್ಯ, ಮೈಸೂರು, ಬಿಡದಿ, ರಾಮನಗರ, ಹಾಸನ, ಶ್ರೀರಂಗಪಟ್ಟಣ ಮತ್ತು ಬೆಂಗಳೂರು ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಹೆಚ್ಚು ಕಂಪನಿಗಳನ್ನು ಕರೆತನ್ನಿ. ಈ ಮೂಲಕ ಯುವಕರು, ನಿರುದ್ಯೋಗಿಗಳು, ಮಹಿಳೆಯರು ಮತ್ತು ಅಂಗವಿಕಲರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಒಂದು ವೇದಿಕೆಯನ್ನು ನಿರ್ಮಿಸೋಣ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿ ಕೆ.ಶಿವಮೂರ್ತಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉದ್ಯೋಗ ಮೇಳದಲ್ಲಿ ಜೆ.ಕೆ ಟೈರ್ಸ್, ರಾಣಿ ಮದ್ರಾಸ್, ಗಿಲ್‍ವುಡ್, ಗೋಕುಲ್‍ದಾಸ್, ಶಾಹಿ ಗ್ರೂಪ್ಸ್, ಅಕ್ವೇರಲ್ ಪ್ರೈ.ಲಿ, ಗಿರೀಶ್ ಎಕ್ಸಪೋರ್ಟ್, ಚೋಳ ಪೀಪಲ್ ಅಂಡ್ ಮಾರ್ಕೆಟಿಂಗ್ ಸರ್ವಿಸಸ್, ಇಕ್ವಿಟಾಸ್ ಸ್ಮಾಲ್ ಪೈನಾನ್ಸ್, ಹೆಚ್.ಡಿ.ಬಿ ಪೈನಾನ್ಸ್, ಲೈಟ್ನಿಂಗ್, ವಿಧಾತ್ರ್ರಿ ಮೋಟರ್ಸ್ ಅರಸ್ ಟಾಟಾ ಮೋಟರ್ಸ್, ಅಪೋಲೊಹೋಮ್ ಹೆಲ್ತ್‍ಕೇರ್ ಲಿಮಿಟೆಡ್, ಉಬರ್ .
ವುಡ್ ಲ್ಯಾಂಡ್, ಹಿಂದುಜಾ ಗ್ಲೋಬಲ್ ಸಲ್ಯೂಷನ್ಸ್, ಟ್ರುವಿಷನ್, ದಿಶಾ ಮೆನೆಜ್‍ಮೆಂಟ್, ರುಡ್‍ರೆಡ್, ಹೆಚ್.ಡಿ.ಎಫ್.ಸಿ, ಜಸ್ಟ್ ಡಯಲ್, ಎಮ್ಸ್, ಎಸ್.ಬಿ.ಐ ಲೈಪ್ ಇನ್‍ಶೂರೆನ್ಸ್, ಜಿ4ಎಸ್, ಯುರೇಖಾಫೋಬ್ಸ್, ನವಭಾರತ್‍ಫರ್ಟಿಲೈಸರ್ಸ್, ಫ್ರೆಂಡ್ಲಿಮೋಟಾರ್ಸ್, ಬಿ.ಎಸ್.ಎಲ್, ಪಿಎಂಕೆಕೆ, ಜೆಟ್‍ಕಿಂಗ್(ರಾಜಾಜಿನಗರ), ಕುಂಬಿಟೆಕ್ನಾಲಜಿ, ಹೆಚ್‍ಜಿಎಸ್.
ಸಮರ್ಥನಂ(ವಿಕಲಚೇತನರಿಗಾಗಿ)ಶಬರಿಗ್ರೂಪ್ಸ್, ಸುರಭಿ ಪ್ಲಾನೆಟೆಕ್ಸ್, ಅರಸ್‍ಕಾರ್ಸ್‍ಸರ್ವೀಸ್ ಸೆಂಟರ್ ಪ್ರೈ ಯಂಗ್ ಇಂಡಿಯಾ ಪ್ರೈ.ಲಿ ಮೈಸೂರು ಲಿ.,ಬಿ.ಬಿ.ಮೋಟರ್ಸ್, ಸಿಪೆಟ್, ಸಾತಿಯ, ಯಂಗ್ ಇಂಡಿಯ,ಬಿ.ಬಿ ಮೋಟರ್ಸ್,ಸಿಪೆಟ್, ಸಾತಿಯ ಹಾಗೂ ಇನ್ನಿತರ 50 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದೆ.
ಕಂಪನಿಯವರು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ, ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ಪ್ರಮಾಣ ಪತ್ರಗಳು, ಸ್ವ ವಿವರ (ಖesume) ಪತ್ರ, 2 ಭಾವ ಚಿತ್ರಗಳು ಹಾಗು ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಮತ್ತು ಆಧಾರ್ ಕಾರ್ಡ್ ಪ್ರತಿಯ ಜೊತೆಗೆ ಭಾಗವಹಿಸಬಹುದಾಗಿದೆ.
ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ,ಬಿಎಸ್ಸಿ(ನರ್ಸಿಂಗ್),ಬಿ.ಇ., ಮತ್ತು ಚಾಲಕರ ಹುದ್ದೆಗಳಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08232-220126 ಹಾಗೂ 9986263695 ಗೆ ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ2 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ6 hours agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ1 day agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

