ದಿನದ ಸುದ್ದಿ
ಫೆಬ್ರವರಿ 24 ಮತ್ತು 25ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ
ಸುದ್ದಿದಿನ,ಶಿವಮೊಗ್ಗ : ಇದೇ ಫೆಬ್ರವರಿ 24 ಮತ್ತು 25ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿ ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಯುವ ಜನರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ಮೇಳದ ವೆಬ್ಸೈಟ್ ಅನಾವರಣಗೊಳಿಸಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಬೃಹತ್ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಖಾಸಗಿ ಕ್ಷೇತ್ರದ 120ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. ಉತ್ಪಾದನಾ ವಲಯ ಮತ್ತು ಅಟೋ ಮೊಬೈಲ್ ಕ್ಷೇತ್ರದ ಕಂಪೆನಿಗಳನ್ನು ಆಹ್ವಾನಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಮೇಳದಲ್ಲಿ ಆಯ್ಕೆ ಮಾಡಲಾಗುವುದು. ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವೀಧರರು, 18ರಿಂದ 40ವರ್ಷ ವಯೋಮಿತಿಯವರು ಭಾಗವಹಿಸಬಹುದಾಗಿದೆ ಎಂದು ಹೇಳಿದರು.
ವೆಬ್ಸೈಟ್ ಅನಾವರಣ
ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಿಗೆ ಅನುಕೂಲವಾಗುವಂತೆ ವೆಬ್ಸೈಟ್ www.shimogaudyogamela.in ಸಿದ್ಧಪಡಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಂದರ್ಶನಕ್ಕೆ ಸಂಬಂಧಿಸಿದ ತರಬೇತಿಯನ್ನು ಪಡೆದುಕೊಳ್ಳಲು ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಲು ವೆಬ್ಸೈಟ್ನಲ್ಲಿ ನೇರವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗ ಮೇಳದ ಸಂಪೂರ್ಣ ವಿವರ ಇದರಲ್ಲಿ ಲಭ್ಯವಿರಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಮೇಲ್ ವಿಳಾಸ shivamoggaudyogamela@gmail.com , ದೂರವಾಣಿ ಸಂಖ್ಯೆ 8762778408, 9448787752, 7892548980, 08182-255293 ಸಂಪರ್ಕಿಸಬಹುದು. ಪ್ರವೇಶ ಉಚಿತವಾಗಿರುತ್ತದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಕೌಶಲ್ಯಾಧಿಕಾರಿ ಗಣಪತಿ ನಾಯಕ್, ಉದ್ಯೋಗಾಧಿಕಾರಿ ಖಲಂದರ್ ಖಾನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ4 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

