Connect with us

ದಿನದ ಸುದ್ದಿ

ಶಿವಮೊಗ್ಗದಲ್ಲಿ ಎರಡು ದಿನ ಬೃಹತ್ ಉದ್ಯೋಗ ಮೇಳ; ಮೊದಲ ದಿನ ಹರಿದು ಬಂದ ಉದ್ಯೋಗಾಕಾಂಕ್ಷಿಗಳು

Published

on

ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗ ನಗರದ ಎಮ್.ಇ.ಎಸ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಮೊದಲದಿನವಾದ ಸೋಮವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲೆಯ ಪ್ರತಿಭಾನ್ವಿತ ನಿರುದ್ಯೋಗಿಗಳು ವಿಕಲಚೇತನರು ಹಾಗೂ ಯುವಕ ಮತ್ತು ಯುವತಿಯರನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ನಿಟ್ಟಿನಲ್ಲಿ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಮೊದಲನೇ ದಿನದ ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ದೇಶ-ವಿದೇಶ ಕಂಪನಿಗಳು, ಬೆಂಗಳೂರಿನ ಪ್ರಮುಖ ಕಂಪನಿಗಳು, ಸಣ್ಣಕೈಗಾರಿಕೆಗಳು, ಸಾಫ್ಟ್‍ವೇರ್, ಉತ್ಪಾದನಾ ವಲಯದ ಕಂಪನಿ, ಅಪ್ರೆಂಟಿಸ್ ತರಬೇತಿ ನೀಡುವ ಕಂಪನಿಗಳು, ಕೃಷಿಯಾಧಾರಿತ ಕಂಪನಿಗಳು ಸೇರಿ 150ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಿದ್ದವು.

ನಗರದ ಕುವೆಂಪು ರಂಗಮಂದಿರ ಹಿಂಭಾಗದ ಎನ್ .ಇ. ಎಸ್ ಮೈದಾನದಲ್ಲಿ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ನಡೆಯುವ ಈ ಉದ್ಯೋಗಮೇಳದಲ್ಲಿ ಈಗಾಗಲೇ ಅನೇಕ ಉದ್ಯೋಗಾಕಾಂಕ್ಷಿಗಳು ಕೆಲಸ ಪಡೆದಿದ್ದು ನೂರಾರು ಜನರು ನಾಳೆಯೂ ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ.

ಕಳೆದ ಜನವರಿ ತಿಂಗಳಿನಿಂದ ಉದ್ಯೋಗಾಕಾಂಕ್ಷಿಗಳ ನೋಂದಣಿಗಾಗಿ ವೆಬ್ ತೆರೆಯಲಾಗಿತ್ತು.ಇದುವರೆಗೂ ಸುಮಾರು ಆರು ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಇಂದು ಸಹ ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದು ಉದ್ಯೋಗಾಕಾಂಕ್ಷಿಗಳಿಗೆ ಸಹಾಯವಾಯಿತು.

ಸೂಕ್ತ ವ್ಯವಸ್ಥೆ

ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಹರಿದು ಬಂದ ಹಿನ್ನೆಲೆ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಯಿತು. ಅವರಿಗೆ ಚೇರ್ ವ್ಯವಸ್ಥೆ, ದೊಡ್ಡ ಪೆಂಡಲ್, ಕುಡಿಯುವ ನೀರು, ಊಟ ಸೇರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಲಾಯಿತು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಂಪನಿಗಳ ಅವಶ್ಯಕತೆಗಳ ಮಾಹಿತಿಯನ್ನು ಉದ್ಯೋಗ ಮೇಳದಲ್ಲಿ ಪರದೆಗಳಲ್ಲಿ ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending