ದಿನದ ಸುದ್ದಿ

JOB NEWS | ದಾವಣಗೆರೆ : ಜುಲೈ 15 ರಂದು ನೇರ ಸಂದರ್ಶನ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಈ ವಾಕ್ ಇನ್ ಇಂಟರ್‍ವೀವ್ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ: 8105122556, 08192-259446 ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version