Connect with us

ದಿನದ ಸುದ್ದಿ

ಟೆಕ್ಕಿ ಶವಕ್ಕಾಗಿ ಕಾದಿರುವ ಕುಟುಂಬ ವರ್ಗ

Published

on

channapatna-tecki-suicide

ಸುದ್ದಿದಿನ: ಉದ್ಯೋಗ ಅಭದ್ರತೆ ಖಿನ್ನತೆಯಿಂದ ನೆದರದಲೆಂಡ್ ನ ಯುಟ್ರಿನ್ ನಗರದ ತಮ್ಮ ಮನೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಚನ್ನಪಟ್ಟಣ ಮೂಲದ ಟೆಕ್ಕಿ ಶಿವ ಪ್ರಸಾದ್ ಶವವನ್ನು ತವರಿಗೆ ತರಿಸಿಕೊಳ್ಳಲು ಕುಟುಂಬ ವರ್ಗ ಇನ್ನಿಲ್ಲದ ಯತ್ನ ನಡೆಸುತ್ತಿದೆ.

channapatna-tecki-suicideನೆದರ್ಲೆಂಡ್ ನಲ್ಲಿ ಕಾನೂನು ಸುವ್ಯವಸ್ಥೆ ಬಿಗಿಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ದಾಖಲೆಗಳ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನು ಒಂದೆರಡು ದಿನ ಹಿಡಿಯಬಹುದು.

ಈ ಮಧ್ಯೆ ಬೆಂಗಳೂರಿನಲ್ಲಿರುವ ಕುಟುಂಬವು ಮುಖ್ಯಮಂತ್ರಿ ಕಚೇರಿಗೆ ಮಂಗಳವಾರ ಭೇಟಿಮಾಡಿ ಅಲ್ಲಿನ ಅನಿವಾಸಿ ಭಾರತೀಯರ ವಿಭಾಗದ ಮೂಲಕ ನೆದರ್ಲೆಂಡ್ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಗೆ ಸಂಪರ್ಕಿಸಲು ಕೋರಿದರು. ಪಾಸ್ ಪೋರ್ಟ್ ವಿವರ ಮಾಹಿತಿಗಳನ್ನು ಕುಟುಂಬದವರಿಂದ ಪಡೆದು ಇ ಮೇಲ್ ಮಾಡಲಾಗಿದೆ. ನಂತರ ದಿಲ್ಲಿಯಲ್ಲಿರುವ ವಿದೇಶಾಂಗ ವ್ಯವಹಾರಗಳ ಸಹಾಯವಾಣಿಗೂ ಕರೆ ಮಾಡಿ ವಿಷಯ ಮುಟ್ಟಿಸಲಾಗಿದೆ.

ಉದ್ಯೋಗ ಭದ್ರತೆ; ಚನ್ನಪಟ್ಟಣದ ಟೆಕ್ಕಿ ಆತ್ಮಹತ್ಯೆ

ಬೆಂಗಳೂರಿನ ನಾಗಶೆಟ್ಟಹಳ್ಳಿಯಲ್ಲಿರುವ ಶಿವಪ್ರಸಾದ್ ಅವರ ಮನೆಯಲ್ಲಿ ದುಃಖ ಮಡುಗಟ್ಟಿದೆ. ದೂರದ ಊರಿಗಳಲ್ಲಿದ್ದ ಅವರ ಸಂಬಂಧಿಗಳು ಬಂದಿದ್ದು, ಶವ ಬರುವಿಕೆಗಾಗಿ ಕಾಯುತ್ತಿದ್ದಾರೆ.

ಈ ಮಧ್ಯೆಶಿವಪ್ರಸಾದ್ ಅವರಸಹೋದ್ಯೋಗಿ ಶಿವಾನಂದ್ ಅವರು ಕುಟುಂಬವನ್ನು ಸಂಪರ್ಕಿಸಿದ್ದು ಆಸ್ಪತ್ರೆಯೊಳಗೆ ತಮ್ಮನ್ನು ಬಿಡುತ್ತಿಲ್ಲ , ಭಾರತೀಯ ರಾಯಭಾರಿ ಕಚೇರಿ ಜತೆ ನಿರಂತರ ಸಂಪರ್ಕದಲ್ಲಿದ್ದು, ಆದಷ್ಟು ಬೇಗ ಪ್ರಕ್ರಿಯೆ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜಧಾನಿ ಆ್ಯಮ್‌ಸ್ಟರ್‌ಡ್ಯಾಂನಿಂದ 16 ಕಿ.ಮೀ ದೂರದಲ್ಲಿರುವ ಯುತ್ರೂನ್‌ ನಗರದಲ್ಲಿ ವಾಸವಿದ್ದ ಶಿವಪ್ರಯಾದ್ ತಾವು ವಾಸವಿದ್ದ ಮನೆಯ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ ಅವರು ನೆದರ್ಲೆಂಡ್‌ನ ಲಿಬರ್ಟಿ ಗ್ಲೋಬಲ್‌ ಎಂಬ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.
ತಮ್ಮ ಗುತ್ತಿಗೆ ಅವಧಿ ಮುಗಿದಿದ್ದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ನೆದರ್ಲೆಂಡ್‌ನಲ್ಲಿ ಹಲವು ಕಂಪನಿಗಳು ಉದ್ಯೋಗಿಗಳನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುತ್ತವೆ. ಅದೇ ರೀತಿ ಶಿವಪ್ರಸಾದ್‌ ಅವರೂ ಕೆಲಸ ಮಾಡುತ್ತಿದ್ದರು. ಇನ್ನೇನು ಅವರ ಕೆಲಸದ ಅವಧಿ ಮುಗಿಯುವುದರಲ್ಲಿತ್ತು. ಮುಂದೇನು ಮಾಡುವುದು ಎಂದು ಅವರು ಸದಾ ಯೋಚಿಸುತ್ತಿದ್ದರು. ಆದರೆ ಇಂಥ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಅವರ ಸಹೋದ್ಯೋಗಿ ಕರ್ನಾಟಕ ಮೂಲದ ಶಿವಾನಂದ್‌ ಎಂಬುವವರುತಿಳಿಸಿದ್ದಾರೆ.

ಶಿವಪ್ರಸಾದ್‌ ಅವರಿಗೆ ಮದುವೆಯಾಗಿ ಒಂದು ಮಗುವಿದೆ. ತಿಂಗಳಿನಿಂದ ಇಲ್ಲಿದ್ದ ಅವರು ಕಳೆದ ಗುರುವಾರ ತವರಿಗೆ ಮರಳಿದ್ದರು ಎಂದು ಶಿವಾನಂದ್‌ ಹೇಳಿದ್ದಾರೆ.

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

ದಿನದ ಸುದ್ದಿ5 days ago

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು...

ದಿನದ ಸುದ್ದಿ5 days ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ2 weeks ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ3 weeks ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ3 weeks ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ3 weeks ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ4 weeks ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ4 weeks ago

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ...

ದಿನದ ಸುದ್ದಿ4 weeks ago

ಏ.1 ರಿಂದ 2026ರ ಡಿಜಿಟಲ್ ಜನಗಣತಿ

ಸುದ್ದಿದಿನ,ದಾವಣಗೆರೆ :2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ...

Trending