Connect with us

ದಿನದ ಸುದ್ದಿ

ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ

Published

on

(ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಅಡಿಯಲ್ಲಿ ಆಯೋಜನೆ)

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ನೇತೃತ್ವದಲ್ಲಿ ಖ್ಯಾತ ಐಟಿ ತರಬೇತಿ ಸಂಸ್ಥೆ ಕ್ಯೂ-ಸ್ಪೈಡರ್ಸ್, ಎಸ್ ಎಸ್ ಕೆರ್ ಟ್ರಸ್ಟ್ ದಾವಣಗೆರೆ ವಿ ವಿ ವತಿಯಿಂದ ಉದ್ಯೋಗಾಧಾರಿತ ತರಬೇತಿ ಆಯ್ಕೆ ಪ್ರಕ್ರಿಯೆ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಬಿ.ಸಿ. ತಹಸಿಲ್ದಾರ್ ಅಧ್ಯಕ್ಷತೆ ವಹಿಸಿದ್ದರು.

ಪ್ರಾಸ್ತಾವಿಕವಾಗಿ ಶ್ರೀ ವೀರೇಶ್ ಪಟೇಲ್ ರವರು ಮಾತನಾಡಿ, ಕ್ಯೂ-ಸ್ಪೈಡರ್ಸ್ ಸಂಸ್ಥೆ ಅನೇಕ ಯುವಕರಿಗೆ ಉದ್ಯೋಗದ ಅವಕಾಶ ಒದಗಿಸುತ್ತಿದ್ದು, ತರಬೇತಿ ಮೂಲಕ ಅವರ ತಾಂತ್ರಿಕ ಹಾಗೂ ಸಂವಹನ ಕೌಶಲ್ಯಗಳನ್ನು ವೃದ್ಧಿಸಲು ನೆರವಾಗುತ್ತಿದೆ ಎಂದು ವಿವರಿಸಿದರು. ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ನೇರವಾಗಿ ಐಟಿ ಮತ್ತಿತರ ಉದ್ಯೋಗದ ಅವಕಾಶ ಸಿಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಜುನಾಥ ಗಡಿಗುಡಳ ಅತಿಥಿಯಾಗಿ ಭಾಗವಹಿಸಿ, ತರಬೇತಿಯ ಮಹತ್ವ ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವ ಅಗತ್ಯತೆಯನ್ನು ವಿವರಿಸಿದರು.

ಪ್ಲೇಸ್ಮೆಂಟ್ ಸೆಲ್ ಸಂಚಾಲಕರಾದ ವೆಂಕಟೇಶ್ ಬಾಬು ಅವರು ಕೌಶಲ್ಯಗಳ ಮಹತ್ವ ವಿವರಿಸಿದರು.
ಪ್ಲೇಸ್ಮೆಂಟ್ ಸೆಲ್ ಸಂಯೋಜನೆಯೊಂದಿಗೆ ಈ ಆಯ್ಕೆ ಪ್ರಕ್ರಿಯೆ ಸರಳವಾಗಿ ಮತ್ತು ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡರು.

ವಿವಿಧ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಒಟ್ಟು 102 ವಿದ್ಯಾರ್ಥಿಗಳು ಆಯ್ಕೆಯಾದರು. ಕಲಾ ವಿಭಾಗ 33, ವಾಣಿಜ್ಯ ವಿಭಾಗ 48, ವಿಜ್ಞಾನ ವಿಭಾಗ 21ವಿದ್ಯಾರ್ಥಿಗಳು ತರಬೇತಿಗೆ ಆಯ್ಕೆಯಾದರು. ಕಾಲೇಜಿನ ಸ್ನಾತಕ ವಿಭಾಗದ ಪ್ಲೇಸ್ಮೆಂಟ್ ಸಂಚಾಲಕರಾದ ಪ್ರೊ ಸ್ಮಿತಾ ಪ್ರೊ ರಾಜ್ ಮೋಹನ್ ಪ್ರೊ ದಾದಪಿರ್ ಹಾಗೂ ಎಲ್ಲಾ ಅಧ್ಯಾಪಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್‌ ಡಾ. ಪ್ರಸಾದ್‌ ಬಿ ರಾಂಪುರೆ , ರಿಜಿಸ್ಟ್ರಾರ್‌ (ಮೌಲ್ಯಮಾಪನ) ಡಾ.ಉಜ್ವಲ್‌ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್‌ ನಾಯಕ್‌ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.

ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್‌, ಡಾ. ಧನಂಜಯ್‌ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್‌, ಡಿ.ಟಿ.ಶ್ರೀನಿವಾಸ್‌ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ : ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ 2006 ರಿಂದ 2025ರ ಅವಧಿಯಲ್ಲಿ ಅಧ್ಯಯನ ಮಾಡಿರುವ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನದ ವಿತರಣೆ ಹಾಗೂ ಟ್ಯಾಬ್, ಲ್ಯಾಪ್‌ಟ್ಯಾಪ್, ಟೂಲ್‌ಕಿಟ್ ವಿತರಣೆಯಲ್ಲಿ ವಂಚನೆ ನಡೆಸಿರುವ ಪ್ರಾಂಶುಪಾಲರಾದ ಶ್ರೀ ಅಮರಪ್ಪ ಗಾಣಿಗೇರ ಇವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ 2006 ರಿಂದ 2025ರ ಅವಧಿಯಲ್ಲಿ ಅಧ್ಯಯನ ಮಾಡಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿವೇತನ ಮತ್ತು ಅಧ್ಯಯನಕ್ಕೆ ಪೂರಕವಾಗಿ ಸರ್ಕಾರದಿಂದ ನೀಡಲಾದ ಟೂಲ್‌ಕಿಟ್‌ಗಳನ್ನು ವಿತರಣೆ ಮಾಡದೆ ವಂಚನೆ ಮಾಡಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಜಂಟಿ ನಿರ್ದೇಶಕರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳಿ ಇವರಿಗೆ ದೂರು ನೀಡಲಾಗಿತ್ತು.

ದೂರು ನೀಡಿ 4 ತಿಂಗಳು ಕಳೆಯುತ್ತ ಬಂದರೂ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳಿ ಇವರು ಯಾವುದೇ ತನಿಖೆ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಇಂದು ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending