ದಿನದ ಸುದ್ದಿ
ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿದ್ದು, 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ದಿ:14/09/2020 ಸೋಮವಾರದಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ ತಕ್ಷಣವೇ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595,9449371579, 9538271653 ಅಥವಾ ದೂರವಾಣಿ ನಂ: 08182-245721 ಸಂಪರ್ಕಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


