Connect with us

ದಿನದ ಸುದ್ದಿ

ಮಕ್ಕಳಿಗೆ ಮೊದಲು ಸಂಸ್ಕಾರ ಕಲಿಸಿ : ಪದ್ಮಶ್ರೀ ಜೋಗತಿ ಮಂಜಮ್ಮ

Published

on

ಸುದ್ದಿದಿನಡೆಸ್ಕ್: ಮಸ್ಕಿ ತಾಲೂಕು ಗ್ರಾಮದ ಶ್ರೀಮತಿ ಹೊನ್ನೂರಮ್ಮ ಡಿ.ಎಂ. ಸಿದ್ದಪ್ಪ ಸ್ಮಾರಕ ಸರಕಾರಿ ಪ್ರಥಮ ಕಾಲೇಜ್ ಆವರಣದಲ್ಲಿ ಯುವ ಕವಿ ಲಕ್ಷ್ಮಣ್ ನಿಟ್ರುವಟ್ಟಿ ತೆಕ್ಕಲಕೋಟೆ ‌ರಚಿಸಿರುವ ಬಾಲಶತಕ ಮುಕ್ತ ಕಗಳು ಎಂಬ ಗ್ರಂಥ ಕರ್ನಾಟಕ ನಿಕಟ ಪೂರ್ವ ಜನಪದ ಅಕಾಡೆಮಿ ಪದ್ಮಶ್ರೀ ಪುರಸ್ಕೃತರಾದ ಡಾ.ಮಂಜಮ್ಮ ಜೋಗತಿ ಜ್ಯೋತಿ ಬೆಳಗುವ ಮುಖಾಂತರಉದ್ಘಾಟಿಸಿದರು.

ನಂತರ ಮಾತನಾಡಿದ ಮಕ್ಕಳಿಗೆ ಸರಕಾರಿ ಕನ್ನಡ ಶಾಲೆಯಲ್ಲಿ ಓದಿಸಬೇಕು ನಮ್ಮ ಕನ್ನಡಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಮತ್ತು ಒಳ್ಳೆಯ ಸಂಸ್ಕಾರವನ್ನು ಕಲಿಸಬೇಕು ಆಗ ಮಾತ್ರ ನಮ್ಮ ನಾಡು ನುಡಿ ಉಳಿಯಲು ಸಾಧ್ಯ ಮಂಗಳಮುಖಿಯರನ್ನು ವಿದ್ಯಾಭ್ಯಾಸದ ಕಡೆಗೆ ಕರೆತನ್ನಿ ಅವರಿಗೆ ವಿದ್ಯಾಭ್ಯಾಸ ನೀಡಿ ಈಗಾಗಲೇ ಎಷ್ಟೋ ಜನ ಮಂಗಳಮುಖಿಯರು ಸರಕಾರಿ ನೌಕರಿಯಲ್ಲಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಿನ್ಸಿಪಾಲರಾದ ಮಲ್ಲಿಕಾರ್ಜುನ ಮುಕ. ನಾಗರಾಜ್ ಚಿಕ್ಕಮಂಗಳೂರು. ಡಾಕ್ಟರ್ ವೇಣುಗೋಪಾಲ್. ದೀಕ್ಷಿತ್ ಗುಡಿಬಂಡಿ ಚಿಕ್ಕಮಂಗಳೂರು. ಸಿದ್ದರಾಮಯ್ಯ ಸ್ವಾಮಿಗಳು ತೆಕ್ಕಲಕೋಟೆ. ಸಂಪಾದಕರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ತಾಲೂಕು ಅಧ್ಯಕ್ಷರು .ಸಾಹಿತಿಗಳು. ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending