Connect with us

ರಾಜಕೀಯ

ಆಯುಷ್ ವಿವಿ ವಿಧೇಯಕ ಸೇರಿ 08 ವಿಧೇಯಕಗಳಿಗೆ ವಿಧಾನ ಪರಿಷತ್‍ನಲ್ಲಿ ಅಂಗೀಕಾರ

Published

on

ಸುದ್ದಿದಿನ,ಬೆಳಗಾವಿ ಸುವರ್ಣಸೌಧ :ವಿಧಾನಪರಿಷತ್‍ನಲ್ಲಿ ಬುಧವಾರ ಎಂಟು ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ. ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿರುವ ವಿಧೇಯಕಗಳನ್ನು ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ಸಭೆಯ ಮುಂದಿಟ್ಟರು.

  1. ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ಎರಡನೇ ತಿದ್ದುಪಡಿ) ವಿಧೇಯಕ
  2. ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕ
  3. ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ
  4. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ(ತಿದ್ದುಪಡಿ) ವಿಧೇಯಕ
  5. ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ
  6. ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ
  7. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ)(ಎರಡನೇ ತಿದ್ದುಪಡಿ)ವಿಧೇಯಕ
  8. ವಿಶ್ವೇಶ್ವರಯ್ಯ ಇಂಜನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ವಿಧೇಯಕಗಳ ಕುರಿತು ಸದನದಲ್ಲಿ ಸುಧೀರ್ಘ ಚರ್ಚೆ ನಡೆಯಿತು.

ಸದಸ್ಯರು ಹಾಗೂ ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಮಂಡಿಸಲಾದ ಎಂಟು ವಿಧೇಯಕಗಳಿಗೆ ಸದನವು ಅಂಗೀಕರಿಸಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ‌‌ ಕಾರ್ಯನಿರ್ವಹಣಾ ಸಮಿತಿ ರಚನೆ

Published

on

ಸುದ್ದಿದಿನಡೆಸ್ಕ್:ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ, 12 ಜನ ಅಧಿಕಾರಿಗಳನ್ನು ಒಳಗೊಂಡ, ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲಾಗಿದೆ ಎಂದು, ಪಂಚಾಯತ್‌ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ : 

ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿ ನಿಯಮ, 1993ರ ಪ್ರಕರಣ 199ಕ್ಕೆ ತರಲು ಉದ್ದೇಶಿಸಿರುವ, ತಿದ್ದುಪಡಿಗಳಿಗೆ ಅನುಗುಣವಾಗಿ, ಇ-ಸ್ವತ್ತಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆ ಹಾಗೂ ಇ-ಸ್ವತ್ತು ಸುಧಾರಣೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವ ಹೊಣೆ ಈ ಸಮಿತಿಗೆ ವಹಿಸಲಾಗಿದೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಬೆಂಗಳೂರಿನ ಕೆಂಗೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಲಿದೇವ ಸಮುದಾಯ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಸಮುದಾಯಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ನೀಡುವ ಮೊತ್ತವನ್ನು ಒಂದೂವರೆಯಿಂದ ಎರಡು ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಮಡಿವಾಳ ಸಮುದಾಯದ ಪ್ರಗತಿ ಸರ್ಕಾರ ಬದ್ಧವಾಗಿದ್ದು, ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಎಲ್ಲ ಪ್ರಯತ್ನ ಮಾಡಲಾಗುವುದು. 12ನೇ ಶತಮಾನದಲ್ಲಿ ಮಡಿವಾಳ ಮಾಚಿದೇವರು, ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಟ ಮಾಡಿದ್ದರು ಎಂದು ಹೇಳಿದರು.

ಈ ವೇಳೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಎಸ್.ಟಿ. ಸೋಮಶೇಖರ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ರಾಜಕೀಯ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ.3 ರೊಳಗಾಗಿ ವೆಬ್‍ಸೈಟ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಲು ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending