ದಿನದ ಸುದ್ದಿ
ಕರ್ನಾಟಕ ಮಾಧ್ಯಮ ಅಕಾಡೆಮಿವತಿಯಿಂದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ ,ಬೆಂಗಳೂರು :ಕರ್ನಾಟಕ ಮಾಧ್ಯಮ ಅಕಾಡೆಮಿಯ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ (ಎಸ್.ಸಿ.ಪಿ./ ಟಿ.ಎಸ್.ಪಿ) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಪರಿಶಿಷ್ಟ ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯ / ವಾಹಿನಿಗಳಲ್ಲಿ ತರಬೇತಿ ನೀಡಿ ಮಾಹೆಯಾನ 15,000 ರೂ. ಗಳ ಸ್ಟೈಫಂಡ್ ನೀಡಲಾಗುವುದು.
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ traineekma2020@gmail.com ಮೂಲಕ ಅಥವಾ ಅಂಚೆ ಮೂಲಕ ದಿನಾಂಕ : 27-11-2020 ರ ಒಳಗೆ ತಲುಪುವಂತೆ ಕಳುಹಿಸಬೇಕು.
ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ಹೂಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧಿಕೃತ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


