ದಿನದ ಸುದ್ದಿ

ಬೆಂ.ಗ್ರಾ.ಜಿಲ್ಲೆ | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

Published

on

ಬೆಂಗಳೂರು ಗ್ರಾಮಾಂತರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 27 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು.

ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು.

ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎರಡನೇ ಮಹಡಿ, ನಂ.17 ವಾರ್ತಾಸೌಧ,ಇನ್‌ಫಂಟ್ರಿ ರಸ್ತೆ-ಬೆಂಗಳೂರು-01 ಅಥವಾ ಮೊಬೈಲ್ ಸಂಖ್ಯೆ: 9480841249 ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version