ದಿನದ ಸುದ್ದಿ
ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್ಲೈನ್ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.
ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.
ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.
ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.
ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್ಗಳನ್ನು ನೀಡಲಾಗುವುದು.
ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


