Connect with us

ರಾಜಕೀಯ

ಹೃದಯಘಾತದಿಂದ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ನಿಧನ

Published

on

ಸುದ್ದಿದಿನ, ಬೆಂಗಳೂರು : ಹಿರಿಯ ಕ್ರೈಮ್ ವರದಿಗಾರ, ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಅವರಿಗೆ ಹೃದಯಾಘಾತವಾಯಿತೆಂದು ಹೇಳಲಾಗುತ್ತಿದೆ.

ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು.ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು ಹೆಗ್ಗರವಳ್ಳಿ.

ಆದ್ರೆ ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ ಹೊರಬಿದ್ದಿದ್ದರು ಹೆಗ್ಗರವಳ್ಳಿ.
ನಂತ್ರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ರು.ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿ ಗಮನ ಸೆಳೆದಿದ್ದರು.ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತ ಸಮೂಹ ವಿಷಾದ-ಸಂತಾಪ ವ್ಯಕ್ತಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಕೃಪಾಂಕ ನೀಡಿಕೆ ನಿಲ್ಲಬೇಕು : ಸಿಎಂ ಸಿದ್ದರಾಮಯ್ಯ ಒತ್ತಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ನೀಡಿಕೆ ಪದ್ಧತಿಯನ್ನು ನಿಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು. ರಾಜ್ಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿಮೆಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವೇದಿಕೆ ಸಜ್ಜಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಸಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending