ರಾಜಕೀಯ

ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ.

ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ಕೆ.ಸಿ. ರಾಮಮೂರ್ತಿ, ಜೈರಾಮ್ ರಮೇಶ್, ಆಸ್ಕರ್ ಫರ್ನಾಂಡೀಸ್ ಮತ್ತು ನಿರ್ಮಲಾ ಸೀತಾರಾಮನ್ ಅವರ ಅವಧಿ ಇದೇ ಜೂನ್‌ನಲ್ಲಿ ಕೊನೆಗೊಳ್ಳಲಿದೆ.

ಈ ತಿಂಗಳ 24ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಮೇ 31ಕೊನೆಯ ದಿನಾಂಕವಾಗಿದೆ. ಮರುದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 3 ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕಡೆಯ ದಿನಾಂಕವಾಗಿದೆ. ಜೂನ್ 10ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ 5 ಗಂಟೆಯ ನಂತರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 13ಕ್ಕೆ ಒಟ್ಟಾರೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version