ದಿನದ ಸುದ್ದಿ

ಜೂನ್ 26 ರಂದು ಮಾದಕ ವ್ಯಸನ ; ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

Published

on

ಸುದ್ದಿದಿನ, ಚನ್ನಗಿರಿ : ವಿಶ್ವ ಮಾದಕ ವ್ಯಸನ ಮತ್ತು ಕಳ್ಳ ಸಾಗಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜೂ 26ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಚನ್ನಗಿರಿಯ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಪ್ರಥಮ ದರ್ಜೆ ಕಾಲೇಜು ಹಾಗೂ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸ್ವಾಸ್ಥ ಸಂಕಲ್ಪ ಯೋಜನೆಯ ಸಂಪನ್ಮೂಲ ವ್ಯಕ್ತಿ ಹಾಗೂ ನಿವೃತ್ತ ಶಿಕ್ಷಕರಾದ ಎಮ್ ಯು ಚನ್ನಬಸಪ್ಪ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಜಗದೀಶ್ ಪತ್ರಕರ್ತರು ಹಾಗೂ ಶಿವಕುಮಾರ್ ಉಪನ್ಯಾಸಕರು, ಪೊಲೀಸ್ ಇಲಾಖೆ ಅಧಿಕಾರಿಗಳು, ಅಬಕಾರಿ ಇಲಾಖೆ ಅಧಿಕಾರಿಗಳು, ಹಾಗೂ ಕಾಲೇಜಿನ ಪ್ರಾಂಶುಪಾಲರು ಭಾಗವಹಿಸುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version