ದಿನದ ಸುದ್ದಿ
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಸಂಬಂಧ ಇಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
7 ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದೆ. ಇದೇ 17ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಈ ತಿಂಗಳ 24 ಕೊನೆಯದಿನ. ಮರುದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
27ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕಡೆಯ ದಿನಾಂಕವಾಗಿದೆ. ಜೂನ್ 3ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243