ದಿನದ ಸುದ್ದಿ

ಎಸ್‍ಎಸ್‍ಸಿ-ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆ

Published

on

ಸುದ್ದಿದಿನ,ದಾವಣಗೆರೆ : ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕಿರಿಯ (ಜೂನಿಯರ್) ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ ಕ್ವಾಂಟಿಟಿ ಸರ್ವೇಯಿಂಗ್ ಆ್ಯಂಡ್ ಕಾಂಟ್ರಾಕ್ಟ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ https://ssc.nic.in or www.sskkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರ ವಯೋಮಿತಿ 30 ವಷದೊಳಗಿರಬೇಕು.. ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version