ದಿನದ ಸುದ್ದಿ
ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ
ಸುದ್ದಿದಿನ ಡೆಸ್ಕ್ : ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರಗ ಜ್ಞಾನೇಂದ್ರ, ವಿ. ಸೋಮಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಮೂಲತಃ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಪಡೇಕನೂರು ಗ್ರಾಮದವರಾಗಿದ್ದಾರೆ. ಈ ಹಿಂದೆ ಎರಡೂವರೆ ವರ್ಷಗಳಿಂದ ಉಪಲೋಕಾಯುಕ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243