/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ನೇಮಕ; ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ಸ್ವೀಕಾರ

Published

on

ಸುದ್ದಿದಿನ ದೆಹಲಿ: ನ್ಯಾಯಮೂರ್ತಿರಂಜನ್ ಗೊಗೊಯ್ ಅವರ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.  ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಸುಪ್ರೀಂ ಕೋರ್ಟಿನ 46ನೇ ಸಿಜೆಐ ಆಗಿ ಪ್ರಮಾಣ ವಚನ ಬೋಧಿಸಿದರು. ಮಂಗಳವಾರ ನಿವೃತ್ತಿ ಹೊಂದಿದ ಸಿಜೆಐ ದೀಪಕ್ ಮಿಶ್ರಾ ಅವರು ರಂಜನ್ ಗೊಗೊಯ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ನ್ಯಾಯಮೂರ್ತಿ ಗೊಗೊಯ್ ಅವರು 13 ತಿಂಗಳ ತನಕ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. 2019ರ ನವೆಂಬರ್ 17ರಂದು ನಿವೃತ್ತರಟಗಲಿದ್ದಾರೆ. ಸೆಪ್ಟೆಂಬರ್ 13ರಂದು ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಮುಂದಿನ ಸಿಜೆಐ ಆಗಿ ನೇಮಕ ಮಾಡಲಾಗಿತ್ತು. ಆದರೆ. ಇವರ ಆಯ್ಕೆ ಕುರಿತಂತೆ ಸುಪ್ರೀಂ ಕೋರ್ಟ್ ಎದುರು ಸವಾಲು ಎದುರಾಗಿತ್ತು. ಆದರೆ, ಇದನ್ನು ಅಪೆಕ್ಸ್ ಕೋರ್ಟ್ ಪರಿಹರಿಸಿತು.

Trending

Exit mobile version