ದಿನದ ಸುದ್ದಿ

ಭಾರತದ 49ನೇ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಪದಗ್ರಹಣ

Published

on

ಸುದ್ದಿದಿನ ಡೆಸ್ಕ್ : ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (Chief Justice of India), ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ( Uday Lalit )ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾರತದ 49ನೇ ಮುಖ್ಯ ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಹಲವಾರು ಕೇಂದ್ರ ಸಚಿವರು ಉಪಸ್ಥಿತರಿದ್ದರು.

ನೂತನ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಅಧಿಕಾರಾವಧಿ ಕೇವಲ 74ದಿನಗಳದ್ದಾಗಿರುತ್ತದೆ. ಈ ಹಿಂದೆ ಕೆಲವು ಐತಿಹಾಸಿಕ ತೀರ್ಪುಗಳನ್ನು ನೀಡಿದ್ದ ಲಲಿತ್ ಅವರು, ಮುಖ್ಯ ನ್ಯಾಯಮೂರ್ತಿ ಅವಧಿಯಲ್ಲೂ ಕೂಡ ಹಲವು ಪ್ರಮುಖ ಪ್ರಕರಣಗಳನ್ನು ನಿಭಾಯಿಸಬೇಕಾಗುತ್ತದೆ.

ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಅಧ್ಯಯನ ಮಾಡಿರುವ ಅವರು, ಅಪರಾಧ ಕಾನೂನಿನಲ್ಲಿ ವಿಶೇಷತೆ ಹೊಂದಿದ್ದಾರೆ. ಬಾಂಬೆ ಹೈಕೋರ್ಟ್‌ನಲ್ಲಿ 1985ರ ವರೆಗೆ ಸೇವೆ ಸಲ್ಲಿಸಿ, ಬಳಿಕ 1986ರಲ್ಲಿ ದೆಹಲಿಗೆ ಸ್ಥಳಾಂತರಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version