ದಿನದ ಸುದ್ದಿ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ.ಮಲ್ಲಪ್ಪ ನಿಧನ : ಸಂತಾಪ ಸೂಚನೆ

Published

on

ಸುದ್ದಿದಿನ ,ದಾವಣಗೆರೆ: ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕರು ಆಗಿದ್ದ ಕೆ.ಮಲ್ಲಪ್ಪ(94) ಅವರು ದೈವಾಧೀನರಾದರು ಎಂಬ ಸುದ್ದಿ ತಿಳಿದು ಬಹಳ ದುಃಖಿತನಾದೆ. ಮಾಯಕೊಂಡ ಮತ್ತು ಹರಿಹರ ಕ್ಷೇತ್ರದ ಶಾಸಕರಾಗಿ ಅವರು ಹಿಂದೆ ಆಯ್ಕೆಯಾಗಿದ್ದರು.

ಆ ಸಂದರ್ಭದಲ್ಲಿ ಅವರು ಮಾಡಿದ ಕೆಲಸಗಳು ಅವಿಸ್ಮರಣೀಯ. ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version