ದಿನದ ಸುದ್ದಿ
K-SET-EXAM-2024 | ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2024) ಯ ಅಧಿಸೂಚನೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿನ್ನೆ ಪ್ರಕಟಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿದೆ. ಅಭ್ಯರ್ಥಿಗಳು ಕೆಸೆಟ್-2024 ಕ್ಕೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯಾವುದೇ ಇತರ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
ಕೆ-ಸೆಟ್ ಪರೀಕ್ಷೆಗಾಗಿ ಅಭ್ಯರ್ಥಿಗಳು 22-07-2024 – 22-08- 2024 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ ಪಾವತಿಸಲು 26-08-2024 ಕೊನೆಯದಿನವಾಗಿರುತ್ತದೆ. 24-11-2024 ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೆ-ಸೆಟ್ ಪರೀಕ್ಷೆಯನ್ನು ಒಟ್ಟು 41 ವಿಷಯಗಳಲ್ಲಿ ನಡೆಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗೆ ಕೆಇಎ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ https://cetonline.karnataka.gov.in/kea/ ಸುದ್ದಿದಿನ.ಕಾಂ|ವಾಟ್ಸಾಪ್|9980346243