ದಿನದ ಸುದ್ದಿ
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
ಸುದ್ದಿದಿನಡೆಸ್ಕ್:ತಾಂತ್ರಿಕ ತೊಂದರೆಯಿಂದ ಕೆಸೆಟ್ ಪರೀಕ್ಷೆಯ ಅರ್ಜಿ ಸಲ್ಲಿಕೆಯನ್ನು ಮುಂದೂಡಲಾಗಿದೆ. ಜುಲೈ 29 ರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ಜುಲೈ 13ರಂದು ವಿವರವಾದ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆಯನ್ನು ಜುಲೈ 22ರಿಂದ ಪ್ರಾರಂಭಿಸಲಾಗುವುದೆಂದು ತಿಳಿಸಿತ್ತು. ಆದರೆ ಈಗ ತಾಂತ್ರಿಕ ದೋಷದ ಕಾರಣ ದಿನಾಂಕ ಮುಂದೂಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243