ದಿನದ ಸುದ್ದಿ

ಕಬಿನಿ ಪ್ರವಾಹ ಹಿನ್ನೆಲೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಬಂದ್

Published

on

ಸುದ್ದಿದಿನ ಡೆಸ್ಕ್ | ಕಬಿನಿ ಪ್ರವಾಹ ಹಿನ್ನೆಲೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಕಪಿಲಾ ನದಿಯಲ್ಲಿ ನೀರು ತುಂಬಿ ತುಳುಕುತ್ತಿರುವ ಕಾರಣ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ‌.

ಕಬಿನಿ ಜಲಾಶಯದಿಂದ 80 ಸಾವಿರ ಕ್ಯುಸೆಕ್ ನೀರು ಹೊರ ಹರಿವಿನಿಂದ ಭಾರೀ ಪ್ರವಾಹ‌ ಸಂಭವಿಸಲಿದೆ. ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲೂ ಬ್ಯಾರಿಕೇಟ್ ಗಳ ಅಳವಡಿಕೆ ಮಾಡಲಾಗಿದೆ. ಈ‌ ಹಿನ್ನೆಲೆ ವಾಹನಗಳ ಸಂಚಾರಕ್ಕೆ ತಡೊಯೊಡ್ಡಲಾಗಿದೆ.

ನಂಜುಂಡೇಶ್ವರ ದೇವಾಲಯದ ಸುತ್ತಮುತ್ತಲ ಡಾರ್ಮೆಂಟರಿ, ದಾಸೋಹ ಭವನದ ಮಳಿಗೆಗಳು ಕಪಿಲಾ ನದಿಯ ನೀರಿನ ರಭಸಕ್ಕೆ ಮುಳುಗಡೆಯಾಗಿವೆ. ದಶಕಗಳ ಇತಿಹಾಸದಲ್ಲಿ ಎರಡನೆಯ ಬಾರಿಗೆ ಕಪಿಲಾ ನದಿಯಲ್ಲಿ ಭಾರೀ ಪ್ರವಾಹ ಉಂಟಾಗಿದ್ದು, ಸಂಜೆ ವೇಳೆಗೆ ನಂಜುಂಡೇಶ್ವರ ದೇವಾಲಯದರೆಗೂ ಪ್ರವಾಹ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version