ದಿನದ ಸುದ್ದಿ
ಕಬಿನಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ ಮುನ್ನೆಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ
ಸುದ್ದಿದಿನ,ಮೈಸೂರು : ಮೈಸೂರಿನ ಕಬಿನಿ ಜಲಾನಯನ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹೆಚ್ಚಾಗುತ್ತಿದೆ. ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು ಎಂದು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆ ಹೆಚ್,ಡಿ,ಕೋಟೆ ತಾಲೂಕಿನ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದಾರೆ.
ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಕಬಿನಿಯಾಗಿದೆ. ಕಬಿನಿ ಜಲಾಶಯ ಸುತ್ತಮುತ್ತಲ ಪ್ರದೇಶಗಳಿಗೆ ಆತಂಕದ ವಾತಾವರಣ ಎದುರಾಗಲಿದೆ. ಕಳೆದ ಒಂದು ವಾರದಿಂದಲೂ ಎಡಬಿಡದೇ ಮಳೆ ಸುರಿಯುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243