Connect with us

ದಿನದ ಸುದ್ದಿ

ಕಲ್ಯಾಣಕರ್ನಾಟಕ ಜಿಲ್ಲೆಗಳಲ್ಲಿ ಮೂಲಸೌಕರ್ಯಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್: ಕಲ್ಯಾಣ ಕರ್ನಾಟಕ ಪ್ರದೇಶ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳ ಸುಧಾರಣೆಗೆ ಆದ್ಯತೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿರುವ ಕ್ಷೇತ್ರಗಳಿಗೆ ಹೆಚ್ಚು ಗಮನಹರಿಸಬೇಕು. ಹಾಸ್ಟಲ್‌ಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯಾಭಿವೃದ್ಧಿಗೆ ಒತ್ತು ನೀಡಬೇಕು ಎಂದು ಅವರು ಹೇಳಿದರು.

ಲಭ್ಯ ಅನುದಾನವನ್ನು ಆದ್ಯತೆ ಮೇರೆಗೆ ಬಳಸಿಕೊಂಡು ರಸ್ತೆ, ಕುಡಿಯುವ ನೀರು, ನೀರಾವರಿ ಮೊದಲಾದ ಮೂಲಸೌಕರ್ಯಗಳಿಗೆ ಬಳಸಬೇಕು. ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡಬೇಕು. ಸಿಎಸ್‌ಆರ್ ಅಡಿ ಕಲ್ಯಾಣ ಕರ್ನಾಟಕದ ಭಾಗದ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಹೇಳಿದರು.

ಗುಲಬರ್ಗ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ಕೊರತೆ ನಿವಾರಿಸಲು ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶಿಸಿದರು.

ಸಚಿವ ಈಶ್ವರ್ ಖಂಡ್ರೆ

ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ವಲಯದ ಯುವ ಜನರು ಖಾಸಗೀ ವಲಯದಲ್ಲಿ ಉದ್ಯೋಗಗಳಿಗೆ ಅರ್ಹರಾಗುವಂತೆ ಮಾಡಬೇಕಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಒಂದು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.

ಕಲ್ಯಾಣ ಕರ್ನಾಟಕಕ್ಕೆ 371-ಜೆ ಸಾಂವಿಧಾನಿಕ ತಿದ್ದುಪಡಿ ಅಡಿಯಲ್ಲಿ ವಿಶೇಷ ಸ್ಥಾನಮಾನವಿದ್ದರೂ ಸಹ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಇಲಾಖೆಗಳ ಪೂರ್ವಾನುಮೋದನೆಗಾಗಿ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಬೀದರ್ ವಿಮಾನ ನಿಲ್ದಾಣವನ್ನು 6 ತಿಂಗಳಿಂದ ಮುಚ್ಚಲಾಗಿದೆ. ಉಡಾನ್ ಯೋಜನೆಯಡಿ ಸಬ್ಸಿಡಿ ದೊರೆಯದಿರುವುದೇ ಇದಕ್ಕೆ ಕಾರಣ. ಬೀದರ್ ವಿಮಾನ ನಿಲ್ದಾಣದ ಪುನರ್ ಆರಂಭಕ್ಕೆ ಕ್ರಮಕೈಗೊಳ್ಳಬೇಕು ಎಂದು ಈಶ್ವರ್ ಖಂಡ್ರೆ ಮನವಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending