ದಿನದ ಸುದ್ದಿ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 5 ಸಾವಿರ ಕೋಟಿ ರೂಪಾಯಿ ಮೀಸಲು : ಮುಖ್ಯಮಂತ್ರಿ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಕಲಬುರಗಿ : ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ( Development) 5 ಸಾವಿರ ಕೋಟಿ ರೂಪಾಯಿ ಮೀಸಲಿಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( Basavaraj Bommai ) ಘೋಷಿಸಿದ್ದಾರೆ.

ಕಲಬುರಗಿಯಲ್ಲಿ ಭಾನುವಾರ ಜರುಗಿದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಲಬುರಗಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಲಾಗಿದೆ. ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಿಸಲು ಈಗಾಗಲೇ ನಿರ್ಧಾರ ಮಾಡಿದ್ದು, ಸಮಾಜದಲ್ಲಿನ ಎಲ್ಲ ವರ್ಗಗಳ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು.

ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅಮೃತ ಯೋಜನೆ ಜಾರಿಗೊಳಿಸಿ ೩೫೪ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಕಾಗಿನೆಲೆ ಅಭಿವೃದ್ಧಿ, ಸೈನಿಕ ಶಾಲೆಗೆ ಸರ್ಕಾರ ಹೆಚ್ಚು ಅನುದಾನ ಒದಗಿಸಿದೆ ಎಂದು ಹೇಳಿದರು.

ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ಒಬಿಸಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಡಾ. ಲಕ್ಷ್ಮಣ್, ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ಹಲವು ಸಚಿವರು ಹಾಗೂ ಒಬಿಸಿ ಮೋರ್ಚದ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಮೊದಲಾದವರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version