ದಿನದ ಸುದ್ದಿ
ಕಲ್ಯಾಣ ಕರ್ನಾಟಕ ; ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ
ಸುದ್ದಿದಿನಡೆಸ್ಕ್:ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು,ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು. ಈ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6 ಸಾವಿರದ 500 ಶಿಕ್ಷಕರು ಸೇರಿದಂತೆ 15 ಸಾವಿರ ಖಾಲಿ ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243