ಸಿನಿ ಸುದ್ದಿ
ಭಾರತೀಯ ಸೇನೆಗೆ ಸಲ್ಯೂಟ್ ಸಲ್ಲಿಸಿದ ಕಮಲ್ ಹಾಸನ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್
ಸುದ್ದಿದಿನ ಡೆಸ್ಕ್ : ಪಾಕ್ ಮೇಲೆ ಭಾರತೀಯ ಸೇನೆಯಿಂದ ಏರ್ ಅಟ್ಯಾಕ್ ಆಗಿ 200-300 ಉಗ್ರರ ಮೇಲೆ ದಾಳಿ ನಡೆಸಿ, ಹಲವರು ಬಲಿಯಾಗಿರುವ ಶಂಕೆ ವ್ಯಕ್ತತವಾಗಿವೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.
JEMನ ಬೃಹತ್ ಕ್ಯಾಂಪ್‌ಗಳನ್ನ ಸರ್ವನಾಶ ಮಾಡಿರುವ ಸೇನೆ, POKಯಲ್ಲಿ ಹೈ ಅಲರ್ಟ್‌ನಲ್ಲಿರುವ
ಖೈಬರ್ ಪುತುಕ್ವಾದಲ್ಲಿರುವ ಜೈಷ್-ಎ-ಮಹ್ಮಮದ್ ಬೃಹತ್ ಕ್ಯಾಂಪ್ ನಾಶ ಪಡಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಗೋಖಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಯಾಂಡಲ್ ವುಡ್ ಬಾಲಿವುಡ್, ಕಾಲಿವುಡ್ ಸೇರಿದಂದೆ ಭಾರತೀಯ ಚಿತ್ರರಂಗವೇ ಭಾರತೀಯ ಸೇನೆಗೆ ತಮ್ಮ ಸಲ್ಯೂಟ್ ಸಲ್ಲಿಸಿದ್ದಾರೆ. ಅಕ್ಷಯ್ ಕುಮಾರ್, ಸಲ್ಮಾನ್ ಖಾನ್, ಕಮಲ್ ಹಾಸ್ ತಮ್ಮ ಟ್ವಿಟರ್ ಖಾತೆಯಲ್ಲಿ ಸೇನೆಗೊಂದು ಸೆಲ್ಯೂಟ್ ಸಲ್ಲಿಸಿ ದೇಶಾಭಿಮಾನ ಮೆರೆದಿದ್ದಾರೆ.
ಟ್ವೀಟ್ ಗಳು
Respect @IAF_MCC Indian Air Force… Jai ho !!!
— Salman Khan (@BeingSalmanKhan) February 26, 2019
Proud of our #IndianAirForce fighters for destroying terror camps. अंदर घुस के मारो ! Quiet no more! #IndiaStrikesBack
— Akshay Kumar (@akshaykumar) February 26, 2019
Our 12 return safely home after wreaking havoc on terrorist camps in Pakistan. India is proud of its heroes. I salute their valour.
— Kamal Haasan (@ikamalhaasan) February 26, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243