ದಿನದ ಸುದ್ದಿ
ನಾಡೋಜೆ ಕಮಲಾ ಹಂಪನ ನಿಧನ ; ಮೆಡಿಕಲ್ ಕಾಲೇಜಿಗೆ ದೇಹದಾನ : ಗಣ್ಯರ ಸಂತಾಪ
ಸುದ್ದಿದಿನಡೆಸ್ಕ್:ಕನ್ನಡದ ಖ್ಯಾತ ಸಾಹಿತಿ ನಾಡೋಜೆ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಅಸುನೀಗಿದ್ದಾರೆ. ಅವರು ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ.
ಹಂಪನಾ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದ್ದು, ಬಳಿಕ ಮೃತರ ಆಸೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.
ಸಿಎಂ ಸಂತಾಪ
ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.
ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ.
ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಮೃತರ ಆತ್ಮಕ್ಕೆ ಶಾಂತಿ ಕೋರುವೆ.
ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.
ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ.
ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಮೃತರ ಆತ್ಮಕ್ಕೆ ಶಾಂತಿ ಕೋರುವೆ. pic.twitter.com/G5D8mqqqOg— Siddaramaiah (@siddaramaiah) June 22, 2024
ಕನ್ನಡದ ಖ್ಯಾತ ಲೇಖಕಿ ಹಾಗೂ ಸಾಹಿತಿ ಶ್ರೀಮತಿ ಕಮಲಾ ಹಂಪನ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಕಮಲಾ ಅವರು ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬ… pic.twitter.com/HtEOUpBUo5
— DK Shivakumar (@DKShivakumar) June 22, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243